ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ಒಟ್ಟು 30 ತಂಡಗಳು ಭಾಗವಹಿಸಿದ್ದು, ಅವುಗಳಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ವಿಜೃಂಭಣೀಯ ಯಶಸ್ಸು ಸಾಧಿಸಿದ್ದಾರೆ.
10ನೇ ತರಗತಿಯ ವಿದ್ಯಾರ್ಥಿನಿಯರಾದ ರಿಶಿಕಾ ದೇವಾಡಿಗ ಮತ್ತು ಅದಿತಿ ಪೂಜಾರಿ ಅವರು ಪ್ರಥಮ ಬಹುಮಾನವನ್ನು ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅದೇ ರೀತಿ, ಅವನಿ ಶೆಟ್ಟಿ ಮತ್ತು ಪರಿಣಿಕಾ ಅವರು ಮೂರನೇ ಬಹುಮಾನ ಪಡೆದು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ತೋರಿಸಿದ್ದಾರೆ.
ವಿದ್ಯಾರ್ಥಿಗಳ ಪರಿಶ್ರಮ, ತಾಳ್ಮೆ ಮತ್ತು ನಿರಂತರ ಅಭ್ಯಾಸಕ್ಕೆ ಇದು ಫಲ. ಈ ಸಾಧನೆ ನಮ್ಮ ಶಾಲೆಯ ಶೈಕ್ಷಣಿಕ ಮಟ್ಟವನ್ನು ಮತ್ತಷ್ಟು ಎತ್ತಿ ಹಿಡಿದಿದೆ: ಶರಣ ಕುಮಾರ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲಾ ಪ್ರಾಂಶುಪಾಲರು










