ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 113ನೇ ತಿಂಗಳ ಕಾರ್ಯಕ್ರಮ ಗೊಂಬೆ ಮನೆಯಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ತಲ್ಲೂರು ಶ್ರೀ ವಿಟ್ಠಲ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಟಿ. ಎನ್.ಪ್ರಭು, ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ, ವಸಂತಿ ಪಂಡಿತ್ ಕುಂದಾಪುರ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು.

ಬಹುಮುಖ ಪ್ರತಿಭೆ, ಕರ್ನಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ಜನಾರ್ದನ ಹಂದೆ, ಮಂಗಳೂರು ಇವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.
ಇದೇ ವೇದಿಕೆಯಿಂದ ಹೊರಹೊಮ್ಮಿದ ಯುವ ಪ್ರತಿಭೆ ಇತ್ತೀಚೆಗೆ ರಾಜ್ಯ ಮಟ್ಟದಲ್ಲಿ ಕೊಳಲು ವಾದನದಲ್ಲಿ ಪ್ರಶಸ್ತಿ ಪಡೆದ ಶ್ಯಾಮ್ ಜಿ. ಎನ್. ಪೂಜಾರಿ, ಗಂಗೊಳ್ಳಿ ಅವರನ್ನೂ ಕೂಡ ಶಾಲು ಹೊದಿಸಿ ಗೌರವಿಸಲಾಯಿತು. ತದನಂತರ ಜನಾರ್ದನ ಹಂದೆಯವರಿಂದ ಗಾನಧಾರ – ಕಥಾಸಾರ ವಿನೂತನ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು. ಉದಯ ಭಂಡಾರ್‌ಕಾರ್, ಹಟ್ಟಿಯಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು.










