ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ ತುಮಕೂರು ಜಿಲ್ಲೆಯಲ್ಲಿ ನಡೆದ U17 ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಆರಾಧ್ಯ ಎಸ್. ಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಸ್ಸಾಂನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚೆಸ್ ಆಟಗಾರ್ತಿಯಾಗಿ ಪ್ರತಿನಿಧಿಸಲಿರುವ ಆರಾಧ್ಯಗೆ ಪ್ರಕೃತಿ ಫೌಂಡೇಶನ್ ರಿ. ಬೆಂಗಳೂರು ಮತ್ತು ಕಶ್ವಿ ಚೆಸ್ ಸ್ಕೂಲ್ ರಿ. ಕುಂದಾಪುರ ಸಂಸ್ಥೆಗಳು ಅಭಿನಂದಿಸಿದ್ದಾರೆ.










