ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೋಡಿಯ ಹಳೆ ಅಳಿವೆ ಬೀಚ್ ರಸ್ತೆ ಬದಿಯಲ್ಲಿ ಸಂಭವಿಸಿದೆ. ಕೋಡಿ ನಿವಾಸಿ ರಮೇಶ್ ಪೂಜಾರಿ (63) ಮೃತಪಟ್ಟವರು.
ಅವರು ನ.16ರ ರಾತ್ರಿ 11.15ರಿಂದ ನ. 17ರ ಬೆಳಗ್ಗೆ 8 ಗಂಟೆಯ ಮಧ್ಯದ ಅವಧಿಯಲ್ಲಿ ಹಳೆ ಅಳಿವೆ ಕಡೆಯಿಂದ ಬೀಜಾಡಿ ಕಡೆಗೆ ಬೀಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಯಾವುದೋ ವಾಹನ ಬಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಉಪಚರಿಸಿ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ದು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ನ. 17ರ ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಮೃತರ ಅಳಿಯ ದಿನಕರ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










