ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಚೇತನಾ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ.ನಂ-204, ಮಣಿಪಾಲ ದೂ.ಸಂಖ್ಯೆ : 0820-2574978 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.










