ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಲೋಕಾಯುಕ್ತ ಡಿವೈಎಸ್ಪಿ ವಿ. ಎಸ್. ಹಾಲಮೂರ್ತಿ ರಾವ್ ಅವರ ನೇತೃತ್ವದಲ್ಲಿ ಅಹವಾಲು ಸ್ವೀಕಾರ ಹಾಗೂ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಿತು.

ಈ ವೇಳೆ ಐದು ದೂರು ಅರ್ಜಿಯನ್ನು ಲೋಕಾಯುಕ್ತ ಕಾಯಿದೆಯಡಿ ನೋಂದಣಿ ಮಾಡಿಕೊಳ್ಳಲಾಯಿತು. ಆರು ದೂರು ಅರ್ಜಿಯನ್ನು ಸ್ವೀಕರಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಾಲಾವಕಾಶ ನೀಡಿ ಕೂಡಲೇ ಬಗೆಹರಿಸುವಂತೆ ಸೂಚನೆ ನೀಡಲಾಯಿತು.
ಈ ವೇಳೆ ಇನ್ಸ್ಪೆಕ್ಟರ್ ಮಂಜುನಾಥ್, ಬೈಂದೂರು ತಹಸಿಲ್ದಾರ್ ರಾಮಚಂದ್ರಪ್ಪ ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು.










