ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯೂತ್ ಮಟ್ಟದಲ್ಲಿ ಸುಭದ್ರವಾಗಿದ್ದು ಹೆಚ್ಚು ಹೆಚ್ಚು ಯುವ ಸಮೂಹ ಕಾಂಗ್ರೆಸ್ ಪಕ್ಷದ ಕಾರ್ಯವೈಕರಿಯತ್ತ ಆರ್ಕಷಿತರಾಗುತ್ತಿದ್ದಾರೆ ಎಂದು ರಾಜ್ಯದ ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್. ಎಸ್ ಮಂಜುನಾಥ್ ಗೌಡ ಹೇಳಿದರು.
ಅವರು ಬುಧವಾರ ಕೋಟ ಬ್ಲಾಕ್ ಕಾಂಗ್ರೆಸ್ ಇಂದಿರಾ ಕಛೇರಿಯಲ್ಲಿ ಕುಂದಾಪುರ ವಿಧಾನಸಭಾ ವ್ಯಾಪ್ತಿಯ ವಿವಿಧ ಬ್ಲಾಕ್ ಮಟ್ಟದ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಜನಸಾಮಾನ್ಯರು ನೆಮ್ಮದಿಯ ಜೀವನವನ್ನು ಕಾಣುತ್ತಿದ್ದಾರೆ. ರೈತಪರ ವಾತಾವರಣ ಸೃಷ್ಠಿಸಿದೆ ಇಂತಹ ಯೋಜನೆಗಳಿಂದ ಕಂಗೆಟ್ಟ ಬಿಜೆಪಿ ಪಕ್ಷ ಹಿಂದೂ ಮುಸ್ಲಿಂ ಗಲಭೆ ಸೃಷ್ಠಿಸಿ ಕೊಳಕು ರಾಜಕಾರಣ ಮಾಡುತ್ತಿದೆ. ಓಟು ಚೋರಿ ಮೂಲಕ ತಮ್ಮ ಆಡಳಿತವನ್ನು ಕೇಂದ್ರದ ಬಿಜೆಪಿ ಸರಕಾರ ಭದ್ರಪಡಿಸಿಕೊಳ್ಳುತ್ತಿದೆ. ಇದು ನಾಚಿಕೆಗೆಡಿನ ವಿಚಾರವಾಗಿದೆ. ಒಟ್ಟು ದೇಶದ ವ್ಯವಸ್ಥೆಯನ್ನು ಬುಡಮೇಲು ಮಾಡುವ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ವೇಗವಾಗಿ ಜನಸಾಮಾನ್ಯರನ್ನು ತಲುಪುತ್ತಿದೆ ಎಂದರು.

ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಭನಮನ ಸಲ್ಲಿಸಲಾಯಿತು.
ಕಾಂಗ್ರೆಸ್ ಮುಖಂಡರುಗಳಾದ ಶಂಕರ್ ಎ. ಕುಂದರ್, ಮಲ್ಯಾಡಿ ಶಿವರಾಮ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಇಚ್ಛಿತಾರ್ಥ ಶೆಟ್ಟಿ, ದೀಪಕ್ ಕೋಟ್ಯಾನ್, ಕೃಷ್ಣಯ್ಯ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಅಜಿತ್ ಶೆಟ್ಟಿ, ಸೂರಜ್, ಇಬ್ರಾಹಿಂ, ಅಭಿಜಿತ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ಬಾಹುಬಲಿ ಜೈನ್, ನಿಗಮ್ ಸೇರಿದಂತೆ ಪಕ್ಷದ ಹಲವು ಮುಖಂಡರುಗಳು ಉಪಸ್ಥಿತರಿದ್ದರು.










