ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಕಂಬದಕೋಣೆ ಗ್ರಾಮದ ಹಳಗೇರಿಯ ಶ್ರೀ ಕೊಕ್ಕೇಶ್ವರ ದೇವಸ್ಥಾನದಲ್ಲಿ ರಂಗಪೂಜಾದಿ ದೀಪೋತ್ಸವ ಕಾರ್ಯಕ್ರಮವು ಬುಧವಾರದಂದು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಂಗಳಾರತಿ ಸೇವೆ ಹಾಗೂ ಲಘುಉಪಹಾರ ಸೇವೆ ನಡೆಯಿತು.

ಹಳಗೇರಿ ಭಜನಾ ಮಹಿಳೆಯರ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ವೇಳೆ ದೇವಸ್ಥಾನದ ಮೊಕ್ತೇಸರರು, ಭಜನಾ ತಂಡದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಆಡಳಿತ ಮಂಡಳಿ ಪಧಾಧಿಕಾರಿಗಳು ಮತ್ತು ಊರ ಜನರು ಉಪಸ್ಥಿತರಿದ್ದರು.










