Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳ ಪಾಲನೆ ಮಾಡಿ, ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಶಸ್ರ್ತ ಚಿಕಿತ್ಸೆಯ ನಂತರ ನಾಯಿಗಳನ್ನು ಅದೇ ಸ್ಥಳಕ್ಕೆ ವಾಪಾಸು ಬಿಡಬೇಕು. ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಆಶ್ರಯ ತಾಣಗಳಿಗೆ ಬಿಡಬೇಕು. ಸಹಾಯವಾಣಿ ಸ್ಥಾಪನೆ ಹಾಗೂ ಪ್ರದರ್ಶನವನ್ನು ಮಾಡಬೇಕು. ಆಶ್ರಯ ತಾಣಗಳಲ್ಲಿ ಸ್ವಚ್ಚತೆ, ಆಹಾರ, ನೀರು, ನೆರಳು,ಪಶು ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಬೇಕು ಎಂದ ಅವರು, ಪ್ರಾಣಿಗಳ ಹಾಗೂ ನಾಗರಿಕರ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಬೀದಿ ನಾಯಿಗಳ ಸಂಖ್ಯೆ 18,500 ರಷ್ಟು ಇದ್ದು, ಈಗಾಗಲೇ ನಾಯಿಗಳ ಆಶ್ರಯ ತಾಣಕ್ಕಾಗಿ ಉಡುಪಿ ನಗರ ಭಾಗದಲ್ಲಿ ಒಂದು ಎಕರೆ ಜಾಗ ಗುರುತಿಸಲಾಗಿದ್ದು, ಇಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಶೀಘ್ರದಲ್ಲೇ ಸುಸಜ್ಜಿತ ಆಶ್ರಯ ತಾಣ ಪ್ರಾರಂಭಿಸಲು ಹಾಗೂ ಮುಂದಿನ ಮೂರು ದಿನಗಳಲ್ಲಿ ತಾಲೂಕು ಮತ್ತು ನಗರ ಪ್ರದೇಶಕ್ಕೆ ಒಂದರಂತೆ ಆಶ್ರಯ ತಾಣ ನಿರ್ಮಿಸಲು ಬೇಕಾದ ಜಾಗ ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಬೀದಿನಾಯಿಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಸ್ಥಳೀಯ ಮುನ್ಸಿಪಲ್ ಅಧಿಕಾರಿಗಳು ಸಮನ್ವಯದೊಂದಿಗೆ ಪದೇ ಪದೇ ಬೀಡಾಡಿ ದನಗಳು ಮತ್ತು ಪ್ರಾಣಿಗಳು ಕಾಣಿಸುವ ರಾಷ್ಟ್ರೀಯ ಹೆದ್ದಾರಿ ಪರಿಮಿತಿಗಳನ್ನು ಗುರುತಿಸಬೇಕು. ಅಲ್ಲಿರುವ ಎಲ್ಲಾ ದನ ಸೇರಿದಂತೆ ಬೀಡಾಡಿ ಪ್ರಾಣಿಗಳನ್ನು ಆಶ್ರಯ ತಾಣಗಳಿಗೆ ಅಥವಾ ಗೋಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದ ಅವರು, ಹೆದ್ದಾರಿಗಳಲ್ಲಿ ಸ್ಪಷ್ಟವಾಗಿ ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಬೇಕು. ಸದರಿ ಸಂಖ್ಯೆಗಳನ್ನು ಎನ್.ಹೆಚ್.ಎ.ಐ ಕಂಟ್ರೋಲ್ ರೂಂ ಮತ್ತು ಸ್ಥಳೀಯ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಗೆ ಲಿಂಕ್ ಮಾಡಬೇಕು ಎಂದರು.

    ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಡಿಪೋಗಳು, ಬಸ್ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆ ಹಾಗೂ ಕ್ರೀಡಾಂಗಣಗಳನ್ನು ಗುರುತಿಸಿ ಪಟ್ಟಿ ಮಾಡಿ, ಅಲ್ಲಿರುವ ಬೀದಿ ನಾಯಿಗಳ ಸಂಖ್ಯೆಯನ್ನು ಪತ್ತೆ ಹಚ್ಚಬೇಕು. ಈ ಸಂಸ್ಥೆ ವ್ಯಾಪ್ತಿಗಳಲ್ಲಿ ಹಾಗೂ ಸಾರ್ವಜನಿಕ ಆವರಣಗಳಲ್ಲಿ ಸೂಕ್ತ ಬೇಲಿ, ಕಂಪೌಂಡ್, ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಳವಡಿಸಿ, ಬೀದಿ ನಾಯಿಗಳು ಪ್ರವೇಶಿಸದಂತೆ ಕ್ರಮವಹಿಸಬೇಕು ಎಂದ ಅವರು, ಸ್ಥಳೀಯ ನಗರ ಹಾಗೂ ಗ್ರಾಮೀಣ ಸಂಸ್ಥೆಗಳು ಪ್ರತೀ ಮೂರು ತಿಂಗಳಿಗೊಮ್ಮೆ ಮೇಲ್ಕಾಣಿಸಿದ ಆವರಣಗಳಲ್ಲಿ ಬೀದಿ ನಾಯಿಗಳ ವಾಸಸ್ಥಾನಗಳು ಇಲ್ಲದಿರುವ ಬಗ್ಗೆ ತಪಾಸಣೆ ನಡೆಸಿ ವರದಿ, ಸಲ್ಲಿಸಬೇಕು ಎಂದರು.

    Click here

    Click here

    Click here

    Call us

    Call us

    ಸಾಕು ನಾಯಿಗಳ ಮಾಲೀಕರು ನೋಂದಣಿ ಮಾಡಿಕೊಂಡು ನಾಯಿಗಳಿಗೆ ಕಡ್ಡಾಯವಾಗಿ ಕಾಲರ್ ಪಟ್ಟಿ ಅಳವಡಿಸಬೇಕು. ಕಾಲರ್ ಪಟ್ಟಿ ಇಲ್ಲದೆ ರಸ್ತೆ ಬದಿ ಅಲೆದಾಡುತ್ತಿದ್ದರೆ ಅವುಗಳನ್ನು ಬೀದಿ ನಾಯಿ ಎಂದು ಪರಿಗಣಿಸಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಪ್ರಕಟಣೆಗೊಳಿಸಿ ಎಂದು ಸೂಚನೆ ನೀಡಿದರು.

    ಈಗಾಗಲೇ ಉಡುಪಿ ನಗರಸಭಾ ವ್ಯಾಪ್ತಿಯ 10 ಸ್ಥಳಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಜಾಗಗಳನ್ನು ಗುರುತಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಸಹ ಆದಷ್ಟು ಶೀಘ್ರವಾಗಿ ಜಾಗ ಗುರುತಿಸುವ ಕೆಲಸವಾಗಬೇಕು ಎಂದ ಅವರು, ಎಲ್ಲರಿಗೂ ಗುರುತಿನ ಚೀಟಿ ನೀಡಿ ನಿಗದಿಪಡಿಸಿದ ಜಾಗದಲ್ಲೆ ಆಹಾರ ನೀಡುವಂತೆ ಕ್ರಮ ವಹಿಸಬೇಕು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

    ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ಸಾರಿಗೆ, ನಗರಾಭಿವೃದ್ದಿ, ಪಂಚಾಯತ್ ರಾಜ್, ಪಶುಪಾಲನಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯ ಸಾಧಿಸಿ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದ ಅವರು, ನಾಯಿಗಳ ಆರೈಕೆಗೆ ಸೂಕ್ತ ಸ್ಥಳವನ್ನು ಗುರುತಿಸಿ ಸಂವೇದನಾಶೀಲರಾಗಿ ಆದಷ್ಟು ಬೇಗ ಅವುಗಳನ್ನು ಸ್ಥಳಾಂತರಿಸಬೇಕು ಎಂದರು.

    ಸ್ಥಳಾಂತರ ಮಾಡಲಾಗುವ ಬೀದಿ ನಾಯಿಗಳ ಆಶ್ರಯ ತಾಣಗಳ ನಿರ್ವಹಣೆಗಾಗಿ ಪ್ರಾಣಿ ಕಲ್ಯಾಣ ಸಂಸ್ಥೆಗಳು ಹಾಗೂ ಪಶುಸಂಗೋಪನೆ ಇಲಾಖೆಯ ಸಹಯೋಗದೊಂದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ನಾಯಿ ಕಡಿತದಿಂದ ಉಂಟಾಗಬಹುದಾದ ರೇಬೀಸ್ ರೋಗದ ಅಪಾಯಗಳು ಮತ್ತು ಲಸಿಕೆಯ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ರೇಬೀಸ್ ನಿರೋಧಕ ಲಸಿಕೆಯ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದರು.

     ಜಿಲ್ಲಾಮಟ್ಟದಲ್ಲಿ ನೋಡೆಲ್ ಅಧಿಕಾರಿಯನ್ನು ನೇಮಿಸಲು ಸೂಚಿಸಿದ ಅವರು, ದೂರುಗಳ ಸಂಬಂಧ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸಹಾಯವಾಣಿ ತೆರೆದು ಅದು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು. 

    ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    05/12/2025

    ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    04/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d