Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ ರಂಗದ ಶ್ರೇಷ್ಠ ಸಾಧಕ ಕಂದಾವರ ರಘುರಾಮ ಶೆಟ್ಟಿ ನಿಧನ
    ಊರ್ಮನೆ ಸಮಾಚಾರ

    ಯಕ್ಷಗಾನ ರಂಗದ ಶ್ರೇಷ್ಠ ಸಾಧಕ ಕಂದಾವರ ರಘುರಾಮ ಶೆಟ್ಟಿ ನಿಧನ

    Updated:26/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಯಕ್ಷಗಾನ ರಂಗದ ಶ್ರೇಷ್ಠ ಸಾಧಕ , ಪ್ರಸಂಗಕರ್ತ, ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಅವರು ಬುಧವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.

    Click Here

    Call us

    Click Here

    ಯಕ್ಷ ಕವಿ ಕಂದಾವರ ರಘುರಾಮಶೆಟ್ಟಿ ಅವರು ಬಹುಮುಖ ಪ್ರತಿಭೆಯ ಶ್ರೇಷ್ಠ ಪ್ರಸಂಗಕರ್ತರು. ನೂರು ನಾಟಕಗಳಲ್ಲಿ ಹಾಸ್ಯ ನಟನಾಗಿ, ಯಕ್ಷಗಾನದ ಭಾಗವತರಾಗಿ, ಅರ್ಥಧಾರಿಯಾಗಿ, ವೇಷಧಾರಿಯಾಗಿ, ಪ್ರಸಂಗಕರ್ತರಾಗಿ, ನಾಟಕ, ಶಿಶು ಗೀತೆ ಅಭಿನಯ ಗೀತೆ, ಕವನಗಳನ್ನು ರಚಿಸಿದ ಅವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಪ್ರಸಂಗಕರ್ತರಾಗಿ ಕಂದಾವರ ರಘುರಾಮ ಶೆಟ್ಟಿ ಅವರು ‘ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡುತ್ತಿದ್ದರು. ಚೆಲುವೆ ಚಿತ್ರಾವತಿ, ರತಿ ರೇಖಾ, ಶ್ರೀದೇವಿ ಬನಶಂಕರಿ ಮತ್ತು ಶೂದ್ರ ತಪಸ್ವಿನಿಯಂತಹ ಸೂಪರ್ ಹಿಟ್ ಪ್ರಸಂಗಗಳನ್ನು ಕೊಡುಗೆಯಾಗಿ ನೀಡಿದ್ದರು.

    ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾಗಿ ಪುರಾಣ ಪ್ರವಚನದಲ್ಲಿ ವಾಚಕರಾಗಿ, ಪ್ರವಚಕರಾಗಿದ್ದರು. ಆರರಿಂದ ಏಳು ಪ್ರಶಸ್ತಿಗಳನ್ನು ಪಡೆದಿದ್ದರು.

    ಕಂದಾವರ ರಘುರಾಮ ಶೆಟ್ಟಿಯವರು ದಕ್ಷಿಣ ಕನ್ನಡದ ಕುಂದಾಪುರ ತಾಲೂಕಿನ ಬಳ್ಳೂರು ಗ್ರಾಮದ ಕಂದಾವರದಲ್ಲಿ 1936ರಲ್ಲಿ ಜನಿಸಿದ್ದರು. ತಮ್ಮ ಆರಂಭದ ಬದುಕಿನಲ್ಲಿ ‘ಕಂಡೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ, ಸುಮಾರು 35 ವರ್ಷಗಳ ಕಾಲ ಸೇವೆ ಮಾಡಿದ್ದ ಕಂದಾವರ ರಘುರಾಮ ಶೆಟ್ಟಿಯವರು, ‘ಮಾದರಿ ಶಿಕ್ಷಕʼ ಪ್ರಶಸ್ತಿಗೆ ಭಾಜನರಾಗಿದ್ದರು. ತಮ್ಮ ಪತ್ನಿ, ಮಕ್ಕಳು ಮೊಮ್ಮಕ್ಕಳ ಜತೆ ನೂಜಾಡಿಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five × 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.