ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್‌ನಲ್ಲಿ ಸಂವಿಧಾನದ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಭೋದನೆ ಕಾರ್ಯಕ್ರಮ ಜರಗಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಪ್ರತಿಜ್ಞಾ ವಿಧಿ ನೆರವೆರಿಸಿದರು.
ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಮಾತನಾಡಿ, ದೇಶದ ಅತಿ ಉನ್ನತವಾದ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಅರಿತು ಕಾರ್ಯಾಚರಿಸುವಂತ್ತಾಗಬೇಕು. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಎಲ್ಲಾ ವರ್ಗದ ಹಾಗೂ ದೇಶದ ಸಾರ್ವಭೌಮವನ್ನು ಗಟ್ಟಿಗೊಳಿಸಿದೆ ಅಲ್ಲದೆ ಜಾತ್ಯಾತೀತ ರಾಷ್ಟ್ರಕ್ಕೆ ಮುನ್ನುಡಿ ಬರೆದಿದೆ ಎಂದರು.

ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್, ಕಾರಂತ ಪ್ರತಿಷ್ಠಾನದ ಸುಬ್ರಾಯ ಆಚಾರ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.










