ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2025-2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರ ಆಯೋಜಿಸಲಾಯಿತು.
ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಸುಜಾತಾ ಸದಾರಾಮ ಅವರು ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಚಾಲನೆಗೊಳಿಸುವುದರ ಜೊತೆಗೆ ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಪ್ರಾಥಮಿಕ ವಿಭಾಗದ ಮಕ್ಕಳು ಉತ್ಸಾಹದಿ೦ದ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಈ ವಾರ್ಷಿಕ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಕೃಷ್ಣ ಹುಲ್ಲಾಲ್ ಹಾಗೂ ಲತಾ ಗೌಡ ಅವರು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸುವಲ್ಲಿ ಮಾರ್ಗದರ್ಶನ ನೀಡಿದರು. ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿಯಾದ ಜೆ. ರೂಪಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.










