ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ಐಕ್ಯೂಎಸಿ ಮತ್ತು ರಾಜ್ಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇಲ್ಲಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ. ಭಾರತದಂತಹ ನೂರಾರು ಜಾತಿ, ಹತ್ತಾರು ಧರ್ಮ, ವೈವಿಧ್ಯಮಯವಾದ ಸಂಸ್ಕೃತಿ ಆಚರಣೆಗಳಿಂದ ಕೂಡಿರುವ ದೇಶಕ್ಕೆ ಸಂವಿಧಾನ ರೂಪಿಸುವುದು ಸವಾಲಿನ ಕೆಲಸವಾಗಿದ್ದರೂ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದೆ. ಅದಕ್ಕೆ ಕಾರಣ ನಮ್ಮ ಸಶಕ್ತವಾದ ಸಂವಿಧಾನ ದೇಶದಲ್ಲಿ ಸರ್ಕಾರ ಆಡಳಿತ ವ್ಯವಸ್ಥೆ ಯಾವ ರೀತಿ ಇರಬೇಕು ಅದಕ್ಕಾಗಿ ಯಾವ ರೀತಿಯಾಗಿ ಕಾನೂನು, ನಿಯಮಗಳು ಇರಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಅಧಿಕಾರಿ ಮೋಹನ ಕೆ.ಎನ್. ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ಡಾ. ವಿಶ್ವನಾಥ ಆಚಾರ್ಯ ಸ್ವಾಗತಿಸಿದರು. ವಿದ್ಯಾರ್ಥಿನಿ ನಂದಿನಿ ಸಂವಿಧಾನ ಪೀಠಿಕೆ ಭೋದಿಸಿದರು. ಉಪನ್ಯಾಸಕಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿ, ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿ ಕೀರ್ತನ ವಂದಿಸಿದರು.










