ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಿತು.
ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯ ಕುಮಾರ್ ಶೆಟ್ಟಿ, ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಖಜಾಂಚಿ ಎನ್. ಅಶ್ವಿನ್ ನಾಯಕ್, ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಜಿ.ವಿಠಲ ಶೆಣೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೀಕ್ಷಿತ್ ಮೇಸ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್, ನಿರಂಜನ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

ಫಲಿತಾಂಶ:
17ರ ವಯೋಮಾನದ ಹುಡುಗರ ವಿಭಾಗ: ಬ್ರಹ್ಮಾವರ ವಲಯ (ಪ್ರಥಮ), ಕಾರ್ಕಳ ವಲಯ (ದ್ವಿತೀಯ)
17ರ ವಯೋಮಾನದ ಹುಡುಗಿಯರ ವಿಭಾಗ: ಕಾರ್ಕಳ ವಲಯ (ಪ್ರಥಮ), ಬ್ರಹ್ಮಾವರ ವಲಯ (ದ್ವಿತೀಯ)
14ರ ವಯೋಮಾನದ ಹುಡುಗರ ವಿಭಾಗ: ಕಾರ್ಕಳ ವಲಯ (ಪ್ರಥಮ), ಕುಂದಾಪುರ ವಲಯ (ದ್ವಿತೀಯ)
14ರ ವಯೋಮಾನದ ಹುಡುಗಿಯರ ವಿಭಾಗ : ಬ್ರಹ್ಮಾವರ ವಲಯ (ಪ್ರಥಮ), ಕಾರ್ಕಳ ವಲಯ (ದ್ವಿತೀಯ)















