ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿದ್ಧೋದ್ದೇಶ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಮಹಿಳಾ ಮೀನುಗಾರರ ಸಹಕಾರಿ ಸಂಘ ಪ್ರಶಸ್ತಿ ದೊರೆತಿದೆ.

ಬೆಂಗಳೂರಿನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿದ್ಧೋದ್ದೇಶ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಮಹಿಳಾ ಮೀನುಗಾರರ ಸಹಕಾರಿ ಸಂಘ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಅವರಿಗೆ ಪ್ರದಾನಿಸಿ ಗೌರವಿಸಿದರು.
ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ, ಸಚಿವರು, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ ಕಳ್ಳೇರ್, ಇಲಾಖೆ ಅಧಿಕಾರಿಗಳು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣಪತಿ ಖಾರ್ವಿ, ನಿರ್ದೇಶಕರು, ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.










