ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ ಇತ್ತೀಚೆಗೆ ಭಾರತೀಯ ಸಂಗೀತ ಕಲೆಯ ಕುರಿತು ಆಸಕ್ತಿ ಹೆಚ್ಚುತ್ತಿದೆ. ಸಂಗೀತಕ್ಕೆ ಜಾತಿ ಮತ ಪಂಥ ಮತ್ತು ಧರ್ಮ ಇವುಗಳ ಬೇಧವಿಲ್ಲ. ಸಂಗೀತ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬಹುದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಮೂಲಿನ ಸರಸ್ವತಿ ಸಂಗೀತ ಶಾಲೆಯ ನಿರ್ದೇಶಕರಾದ ಶಾರದಾ ಹೊಳ್ಳ ಮಾತನಾಡಿ, ಸಂಗೀತವು ಚಿಂತೆ ಮರೆಸುವ ಕಲೆ. ಮನಸಿಗೆ ಸಂತೋಷ, ಸಮಾಧಾನ ಮತ್ತು ನೆಮ್ಮದಿಯನ್ನು ಕೊಡುತ್ತದೆ. ಈ ಹಿಂದೆ ಸಂಗೀತ ಕಲಿಯುವುದು ಕಷ್ಟ ಆಗಿತ್ತು. ಪ್ರಸ್ತುತ ಸಂಗೀತ ಮತ್ತು ಇತರ ಕಲೆಗಳನ್ನು ಕಲಿಯಲು ಸಾಕಷ್ಟು ಅವಕಾಶಗಳಿವೆ. ಉತ್ತಮ ಏಕಾಗ್ರತೆ ಪಡೆಯಲು ಯಾವುದೇ ಒಂದು ಕಲೆಯ ಕುರಿತು ಆಸಕ್ತಿ ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ವಂದಿಸಿದರು. ಲಲಿತಾ ಕಲಾ ಸಂಘದ ಸಂಯೋಜಕರಾದ ಶಶಾಂಕ್ ಪಟೇಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ ಸ್ನೇಹ ಎಸ್. ಕಾರ್ಯಕ್ರಮ ನಿರೂಪಿಸಿದರು.















