ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ವೀರೇಂದ್ರ ಅವರು ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ವಿಭಾಗಗಳನ್ನು ವೀಕ್ಷಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ಸಂಯೋಜಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಜಯಕರ್ ಶೆಟ್ಟಿ, ಖಜಾಂಚಿಗಳಾದ ಶಿವರಾಮ್ ಶೆಟ್ಟಿ ಹಾಗೂ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಯಾದ ಯೋಗೀಶ್ ಶ್ಯಾನುಭೋಗ್ ಉಪಸ್ಥಿತರಿದ್ದರು.










