Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೇದಿಕೆ – ಶಾಸಕ ಕೊಡ್ಗಿ
    Uncategorized

    ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೇದಿಕೆ – ಶಾಸಕ ಕೊಡ್ಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    “ಮಕ್ಕಳು ಕೇವಲ ಓದು ಮತ್ತು ಅಂಕಗಳು ಎಂದು ಕಳೆದುಹೋಗದೇ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮಕ್ಕಳ ತಮ್ಮ ಪ್ರತಿಭೆಯನ್ನು ಹೊರಹಾಕಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ” ಎಂದು ಶಾಸಕ ಎ. ಕಿರಣ್ ಕುಮಾರ್‌ ಕೊಡ್ಗಿ ಅವರು ಹೇಳಿದರು.

    Click Here

    Call us

    Click Here

    ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ-ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡುತ್ತಾ, “ಹಿಂದೆ ಪ್ರತಿಭೆ ಇದ್ದರೂ ಅವಕಾಶಗಳು ಸಿಗುತ್ತಿರಲಿಲ್ಲ. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಇದನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು.ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯ” ಎಂದು ಅವರು ಹೇಳಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಅವರು, “ಪ್ರತಿಭಾ ಕಾರಂಜಿಯು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಾಯಕಾರಿಯಾಗಿದ್ದು, ಅವರ ಪ್ರತಿಭೆಯನ್ನು ಪ್ರದರ್ಶಿಸುವುದಕ್ಕೆ ಇದೊಂದು ಉತ್ತಮ ವೇದಿಕೆ,” ಎಂದು ಅಭಿಪ್ರಾಯಪಟ್ಟರು.

    ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶೋಭಾ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಈ ಸಂದರ್ಭದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಖಜಾಂಚಿ ಭರತ್ ಶೆಟ್ಟಿ, ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಬಿ.ಅರುಣ್ ಕುಮಾರ್ ಹೆಗ್ಡೆ, ಕುಂದಾಪುರ ವಲಯದ ಕ್ಷೇತ್ರ ಸಮನ್ವಯಧಿಕಾರಿಗಳಾದ ಅಶೋಕ್ ನಾಯ್ಕ್, ಅಕ್ಷರದಾಸೋಹ ಕುಂದಾಪುರದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ಅಧ್ಯಕ್ಷರಾದ ಗಣೇಶ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕುಂದಾಪುರ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಸಹಾಯಕ ಯೋಜನಾ ಸಮನ್ವಯ ಅಧಿಕಾರಿ ಮತ್ತು ಜಿಲ್ಲಾ ನೋಡಲ್ ಜ್ಯೋತಿ ಬಿ., ಮತ್ತು ತಾಲೂಕು ನೊಡೆಲ್ ಶೇಖರ್ ಯು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಶಿಕ್ಷಕ ರಜತ್ ಭಟ್ ಸ್ವಾಗತಿಸಿದರೆ, ಬಿಆರ್ ಪಿ ಸಂತೋಷ್ ಕುಮಾರ್ ಶೆಟ್ಟಿ ಅವರು ನಿರೂಪಿಸಿದರು. ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ

    04/02/2026

    ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ: ಜಿಲ್ಲಾಧಿಕಾರಿ

    03/02/2026

    ಸಾಲಿಗ್ರಾಮದಲ್ಲಿ ಅಯೋಧ್ಯ ಶ್ರೀರಾಮ ಜಪ, ಮುಖ್ಯ ಪೇಟೆಯಲ್ಲೆ ಕುಣಿತ ಭಜನೆ, ಪ್ರಸಾದ ವಿತರಣೆ

    24/01/2026
    Leave A Reply Cancel Reply

    7 + twenty =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.