ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ
ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಕುಂದಾಪುರ ವಲಯ ಮಟ್ಟದ ಹೈಸ್ಕೂಲ್ ವಿಭಾಗದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಇವರಿಗೆ ದ್ವಿತೀಯ ಸ್ಥಾನ ಲಭಿಸಿದೆ.
ಸಾಧಕ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪ ಪ್ರಾಂಶುಪಾಲರು, ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಸಂತಸ ವ್ಯಕ್ತಪಡಿಸಿದ್ದಾರೆ.










