ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆ ಶಂಕರನಾರಾಯಣ ಇಲ್ಲಿನ ಬಾಲ ಪ್ರತಿಭೆ , ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಪ್ರಣತಿ ಜೆ ಶೆಟ್ಟಿ ಇವರು ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಸಾಧಕ ಕಿರಿಯ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.





