Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನ ಧನಲಕ್ಷ್ಮೀಗೆ ಅಭಿನಂದನಾ ಸಮಾರಂಭ
    alvas nudisiri

    ಆಳ್ವಾಸ್‌ನ ಧನಲಕ್ಷ್ಮೀಗೆ ಅಭಿನಂದನಾ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:  
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಮಂಗಳೂರು, ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಹಾಗೂ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದಿರೆಯ ಜಂಟಿ ಸಹಯೋಗದಲ್ಲಿ ಡಾಕಾದಲ್ಲಿ ನಡೆದ ಎರಡನೇ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರ ಅಭಿನಂದನಾ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯಿತು.

    Click Here

    Call us

    Click Here

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಭಾರತದ ಅನೇಕ ರಾಜ್ಯಗಳು ಕ್ರೀಡಾ ಸಾಧಕರಿಗೆ ಅವರ ಸಾಧನೆಯನ್ನು ಮತ್ತಷ್ಟು ಉತ್ತೇಜಿಸಲು ಸರ್ಕಾರಿ ಉದ್ಯೋಗವನ್ನು ನೀಡುತ್ತಿವೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಕೇರಳ ಸರ್ಕಾರಗಳು ಕ್ರೀಡೆಯಲ್ಲಿ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗಗಳನ್ನು ಒದಗಿಸುತ್ತಿರುವುದು ಗಮನಾರ್ಹ. ಇದರ ಪರಿಣಾಮವಾಗಿ ಆ ರಾಜ್ಯಗಳಲ್ಲಿ ಕ್ರೀಡೆಗೆ ಯುವ ಸಮುದಾಯದ ಆಕರ್ಷಣೆ ಹೆಚ್ಚಾಗಿ, ಮೂಲಸೌಕರ್ಯ ಅಭಿವೃದ್ಧಿಗೊಂಡು ಪದಕಗಳ ಪ್ರಮಾಣವೂ ಏರಿಕೆಯಾಗುತ್ತಿದೆ. ಈ ನೆಲೆಯಲ್ಲಿ ಕರ್ನಾಟಕ ಸರ್ಕಾರವೂ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಲು ಮುಂದಾಗಬೇಕು.  ಇದು ಕ್ರೀಡಾಪಟುವಿಗೆ ಆರ್ಥಿಕ ಭದ್ರತೆ ನೀಡುವುದಷ್ಟೇ ಅಲ್ಲ ಅವರ ಸಾಧನೆಗೆ ಸಮರ್ಥ ಗೌರವ ಮತ್ತು ಬದುಕಿನ ಭವಿಷ್ಯಕ್ಕೆ ಭದ್ರ ನೆಲೆ ನೀಡಿದಂತಾಗುತ್ತದೆ. ಯುವ ಶಕ್ತಿಯನ್ನು ದೇಶದ ಪ್ರಗತಿಗೆ ಬಳಸಲು ಸರ್ಕಾರ, ಇಲಾಖೆಗಳು ಹಾಗೂ ಕ್ರೀಡಾ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡುವ ಅಗತ್ಯವಿದೆ ಎಂದರು.

    ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ನ ಗೌರವಾಧ್ಯಕ್ಷ ರಾಕೇಶ್ ಮಲ್ಲಿ ಧನಲಕ್ಷ್ಮಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಅವರಿಗೆ ಸರ್ಕಾರಿ ಹುದ್ದೆ ದೊರೆಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಒತ್ತಡವನ್ನು ತರಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಆಳ್ವಾಸ್ ಸಂಸ್ಥೆ ಕಬಡ್ಡಿ ಸೇರಿದಂತೆ ವಿವಿಧ ಕ್ರೀಡೆಗಳಿಗೆ ನೀಡುತ್ತಿರುವ ನಿರಂತರ ಬೆಂಬಲ ಮತ್ತು ಪ್ರೋತ್ಸಾಹವೇ ಇಂದು ಸಂಸ್ಥೆಯನ್ನು ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸಿದೆ ಎಂದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಧನಲಕ್ಷ್ಮಿ, ವಿಶ್ವ ವೇದಿಕೆಯಲ್ಲಿ ಭಾರತದ ತ್ರಿವರ್ಣಪತಾಕೆಯನ್ನು ಹೆಮ್ಮೆಯಿಂದ ಹಾರಾಡಿಸುವ ಅವಕಾಶ ದೊರೆತ ಕ್ಷಣ ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣವಾಗಿತ್ತು ಎಂದು ಭಾವಪೂರ್ಣವಾಗಿ  ನುಡಿದರು. ತಮ್ಮ ಯಶಸ್ಸಿನ ಹಿನ್ನಲೆಯಲ್ಲಿ ಆಳ್ವಾಸ್ ಸಂಸ್ಥೆಯ ಪಾತ್ರವನ್ನು ವಿಶೇಷವಾಗಿ ಉಲ್ಲೇಖಿಸಿ,  ಆಳ್ವಾಸ್ ಸೇರದೇ ಇದ್ದರೆ ಇಂತಹ ಸಾಧನೆ ನನ್ನಿಂದ ಸಾಧ್ಯವಾಗುತ್ತಿರಲಿಲ್ಲ. ಇಲ್ಲಿ ಸೇರಿದ್ದರಿಂದ ಕ್ರೀಡೆ ಮಾತ್ರವಲ್ಲದೆ, ಶೈಕ್ಷಣಿಕ ಕ್ಷೇತ್ರದಲ್ಲಿಯೂ  ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದರು.

    ಧನಲಕ್ಷ್ಮಿ ಹಾಗೂ ಅವರ ಪೋಷಕರನ್ನು ಸನ್ಮಾನಿಸಿ, ಆಳ್ವಾಸ್ ಸಂಸ್ಥೆಯ ವತಿಯಿಂದ ನಗದು ಹಣವನ್ನು ನೀಡಿ ಗೌರವಿಸಲಾಯಿತು.  

    Click here

    Click here

    Click here

    Call us

    Call us

    ಉದ್ಯಮಿ ನಾರಾಯಣ ಪಿಎಂ, ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ. ಪೂಜಾರಿ, ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ನ ಉಪಾಧ್ಯಕ್ಷ ಸುದರ್ಶನ್, ಧನಲಕ್ಷ್ಮೀ ಕೋಚ್ ಹಂಸವತಿ ಇದ್ದರು. ದ.ಕ ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ನ ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಕ ನವೀನಚಂದ್ರ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    12 − 1 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.