Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿಗಳಿಗೆ ಕಾರಂತ ಬಾಲ ಪುರಸ್ಕಾರ
    ಊರ್ಮನೆ ಸಮಾಚಾರ

    ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿಗಳಿಗೆ ಕಾರಂತ ಬಾಲ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ
    : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರತಿಭಾ ಪರಂಪರೆಗೆ ಮತ್ತೊಂದು ಸುವರ್ಣ ಕಿರೀಟ ಸೇರ್ಪಡೆಗೊಂಡಿದೆ. ಸಂಸ್ಥೆಯ ಹೆಮ್ಮೆಯ ಬಾಲ ಪ್ರತಿಭೆಗಳಾದ ಪನ್ನಗ ಕೆ. ಆರೂರ್ ಹಾಗೂ ಸ್ಮಿತಾ ಬಿ. ಕೆ. ಅವರಿಗೆ “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬ ಮಾತಿನಂತೆ 2025ರ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಲಭಿಸಿರುವುದು ಸಂಸ್ಥೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ.

    Click Here

    Call us

    Click Here

    ಬಹುಮುಖ ಪ್ರತಿಭೆಯಾದ ಪನ್ನಗ ಕೆ. ಆರೂರ್ ಅವರು ಕೇವಲ ನಾಲ್ಕನೇ ವಯಸ್ಸಿನಲ್ಲಿಯೇ ಕಲಾರಾಧನೆಗೆ ತೊಡಗಿಕೊಂಡು, ಐದನೇ ವಯಸ್ಸಿನಲ್ಲಿ ಯಕ್ಷಸಿರಿ ಮಕ್ಕಳ ಬಾಲ ಮೇಳದಲ್ಲಿ ವೇಷಧಾರಿಯಾಗಿ ತನ್ನ ಕಲಾ ಪಯಣವನ್ನು ಆರಂಭಿಸಿದ್ದಾರೆ. ಯಕ್ಷಗಾನದಿಂದ ವಾದ್ಯಗಾನದವರೆಗೆ ಅವರ ಪ್ರಯಾಣ ನಿರಂತರವಾಗಿದ್ದು, ಕೊಳಲು, ಚಂಡೆ, ಮದ್ದಲೆ, ಕಂಜಿರ ಸೇರಿದಂತೆ ಅನೇಕ ವಾದ್ಯಗಳಲ್ಲಿ ಆಸಕ್ತಿ ತಳೆದು, ವಿವಿಧ ವೇದಿಕೆಗಳಲ್ಲಿ ತನ್ನ ಅಪೂರ್ವ ವಾದ್ಯ ಕೌಶಲ್ಯವನ್ನು ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ.

    ಇನ್ನೊರ್ವ ಪ್ರತಿಭಾನ್ವಿತೆ ಸ್ಮಿತಾ ಬಿ. ಕೆ. ಬಾಲ್ಯದಲ್ಲಿಯೇ ಕಲಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಇವರು ಈಗಾಗಲೇ ‘ಶಂಕ್ರ’ಎಂಬ ಟೆಲಿಫಿಲ್ಮ್‌ನಲ್ಲಿ ಬಾಲ ನಟಿಯಾಗಿ ಅಭಿನಯಿಸಿ ತನ್ನ ಅಭಿನಯದ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದಾರೆ. ಅಭಿನಯದ ಜೊತೆಗೆ ನೃತ್ಯ, ಸಂಗೀತ ಹಾಗೂ ಯಕ್ಷಗಾನ ಕ್ಷೇತ್ರಗಳಲ್ಲಿಯೂ ಅಪಾರ ಆಸಕ್ತಿಯನ್ನು ಬೆಳೆಸಿಕೊಂಡಿರುವ ಸ್ಮಿತಾ, ವಿಶೇಷವಾಗಿ ಯಕ್ಷಸಿರಿ ಮೇಳದಲ್ಲಿ ಭಾಗವತಿಕೆಯ ಛಾಪನ್ನು ಮೂಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.

    ಎಳವೆಯಲ್ಲಿಯೇ ಇಂತಹ ಮಹತ್ವದ ಕಾರಂತ ಬಾಲ ಪುರಸ್ಕಾರವನ್ನು ಪಡೆದುಕೊಳ್ಳುವುದು ನಿಜಕ್ಕೂ ಅಪಾರ ಹೆಮ್ಮೆಯ ಹಾಗೂ ಸಂತಸದ ವಿಷಯವಾಗಿದೆ. ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಹರ್ಷ ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ಇನ್ನೂ ಎತ್ತರದ ಸಾಧನೆಗಳನ್ನು ತಲುಪಲಿ ಎಂದು ಹಾರೈಸಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    14 − three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.