ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಯಾವುದೇ ಸರಕಾರಕ್ಕೂ ಅಥವಾ ಯಾವುದೇ ಸಂಸ್ಥೆಗಳಿಗೆ ನೂರಕ್ಕೆ ನೂರರಷ್ಟು ಉದ್ಯೋಗ ನೀಡಲು ಸಾಧ್ಯವಿಲ್ಲ. ಬಹಳಷ್ಟು ಮಂದಿಗೆ ಸ್ವಂತ ಉದ್ಯೋಗ ಮಾಡಲು ಅನುಭವದ ಕೊರತೆ ಇದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು.
ಅವರು ಮಂಗಳವಾರ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರವರ್ತಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಇದು ಆವಿಷ್ಕಾರವಲ್ಲ, ಗಂಗೊಳ್ಳಿಯ ಜನ್ಮದತ್ತ ಕಲೆಯ ಸಾಕ್ಷಾತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಈ ಪ್ರಾಯದಲ್ಲಿ ಸ್ವಂತ ಉದ್ಯೋಗ ಮಾಡುವ ಬಗ್ಗೆ ಮಾಹಿತಿ ಮತ್ತು ಅನುಭವ ದೊರೆತರೆ ಸ್ವಂತ ಉದ್ಯೋಗ ಮಾಡಲು ಸಹಕಾರಿಯಾಗುತ್ತದೆ. ಆರ್ಥಿಕ ಅಭಿವೃದ್ಧಿಗೆ ಊರಿಗೆ, ಸಮಾಜಕ್ಕೆ ದೇಣಿಗೆ, ಪರೋಪಕಾರಿ ಸೇವೆ ಮಾಡಲು ಸ್ವಉದ್ಯೋಗ ಸಹಾಯವಾಗುತ್ತದೆ. ಸರಕಾರಿ ಉದ್ಯೋಗ ಮತ್ತಿತರ ಉದ್ಯೋಗಳಿಗಾಗಿ ಅಲೆದಾಡುವ ಬದಲು ಸ್ವ ಉದ್ಯೋಗದತ್ತ ಗಮನ ಹರಿಸಬೇಕು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಜ್ಞಾನ ಹಾಗೂ ಅನುಭವ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಮಕ್ಕಳ ಸಂತೆ ಕಾರ್ಯಕ್ರಮ ಅತ್ಯದ್ಭುತವಾದುದು ಎಂದರು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಗಣೇಶ ನಾಯಕ್ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ವ್ಯವಸ್ಥಾಪಕ ವಾಸು ದೇವಾಡಿಗ, ಮುಳುಗು ತಜ್ಞ ದಿನೇಶ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಕರಾಟೆ ಪಟು ಟಿ. ಶಶಾಂಕ ಶೆಣೈ, ತುರ್ತು ಚಿಕಿತ್ಸಾ ವಾಹನಗಳ ಚಾಲಕರಾದ ಇಬ್ರಾಹಿಂ ಗಂಗೊಳ್ಳಿ, ಸಚಿನ್ ಖಾರ್ವಿ, ಮಹಮ್ಮದ್ ಸಿಯಾನ್, ಪ್ಯಾಟ್ರಿಕ್ ವಿಲ್ಸನ್ ರೆಬೆರೊ, ಇಮಾಮ್ ಸಾಬಿ, ನವೀನ್ ಎಂ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾಘವೇಂದ್ರ ಖಾರ್ವಿ, ಎಸ್.ವಿ. ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯರಾದ ಕೆ. ರಾಮನಾಥ ನಾಯಕ್, ಎಂ. ನಾಗೇಂದ್ರ ಪೈ, ಎಸ್.ವಿ.ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಭಾಸ್ಕರ ಎಚ್.ಜಿ., ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.
ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ವೆಂಕಟೇಶಮೂರ್ತಿ ಮತ್ತು ಅಕ್ಷಯಾ ಸನ್ಮಾನಿತರರನ್ನು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಂದ ವೈವಿಧ್ಯಮಯ ಉತ್ಪನ್ನಗಳು ಮತ್ತು ಆಹಾರ ತಿನಿಸುಗಳ ಮುಕ್ತ ಮಾರಾಟ, ಭೂತದ ಮನೆ/ ಹಳ್ಳಿ ಮನೆ/ ಸಾಲು ಮರದ ತಿಮ್ಮಕ್ಕ ನರ್ಸರಿ/ ಭಿನ್ನ ಆಟಗಳ ಭರಾಟೆ ಕಾರ್ಯಕ್ರಮದ ಪ್ರಧಾನ ಆಕರ್ಷಣೆಯಾಗಿತ್ತು.















