ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಐಕ್ಯೂಎಸಿ, ವಿದ್ಯಾರ್ಥಿ ವೇದಿಕೆ, ಯುವ ರೆಡ್‌ಕ್ರಾಸ್, ಎನ್.ಎಸ್.ಎಸ್., ರೆಂಜರ್ಸ್ ಮತ್ತು ರೋಜರ್ಸ್ ಘಟಕಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲಯನ್ ರಾಜೀವ್ ಕೋಟ್ಯಾನ್ ಆಗಮಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವರಾಮ ಶೆಟ್ಟಿ, ಸದಾನಂದ ನಾವಡ, ನಾಗರಾಜ ವೈದ್ಯ ಎಂ., ನಾಗರಾಜ ಯು., ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ ಎಂ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ಸಂಯೋಜಿಸಿದರು. ರೇಜರ್ಸ್ ಸಂಚಾಲಕರಾದ ರೋಹಿಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರದಲ್ಲಿ 105 ಯುನಿಟ್ ರಕ್ತ ಸಂಗ್ರಹವಾಗಿದೆ.















