Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    Updated:05/12/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ರಾಷ್ಟ್ರೀಯ ತೋಟಗಾರಿಕೆ ಮಿಷಿನ್ ಯೋಜನೆಯಡಿ ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ ಕೈಗೊಂಡ ರೈತರಿಗೆ ಶೇ. 50 ರ ಸಹಾಯಧನ, ಕೃಷಿ ಯಾಂತ್ರೀಕರಣ ಉಪ ಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ, ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ಶೇ. 90 ರಷ್ಟು ಸಹಾಯಧನ ಲಭ್ಯವಿದ್ದು, ಸಹಾಯಧನ ಪಡೆಯಲು ಕಛೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್ ಗಳ ಮೂಲಕ ರೈತರು ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಬಹುದಾಗಿದೆ.

    ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಉಚಿತ ವಿತರಣೆಯೊಂದಿಗೆ 4 ವರ್ಷಗಳ ಕಾಲ ನಿರ್ವಹಣಾ ವೆಚ್ಚ ಪಾವತಿ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್/ಡೀಸೆಲ್ ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಹಾಗೂ ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಪೌಷ್ಠಿಕ ತೋಟಗಳ ನಿರ್ಮಾಣಕ್ಕೆ ಅವಕಾಶವಿರುತ್ತದೆ.

    ಈ ಎಲ್ಲಾ ಯೋಜನೆಗಳ ಪ್ರಯೋಜನೆ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಇಲಾಖಾ ಮಾರ್ಗಸೂಚಿಯನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    eighteen + 7 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.