ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ. 16 ಸಿ, ಮೌಲಾನಾ ಅಬುಲ್ ಕಲಾಂ ಆಜಾದ್ ಭವನ, ವಸಂತನಗರ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.










