ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ಇದರ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಿ ನಿಬ್ಬಣ ದಿನವನ್ನು ಇಲ್ಲಿನ ವಾಲ್ಮೀಕಿ ಆಶ್ರಮ ವಸತಿ ಶಾಲೆಯಲ್ಲಿ ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುಶೀಲಾ ಅವರು ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ವಿ.ವಿ. ಮಂಡಳಿ ಹೆಮ್ಮಾಡಿ ಇದರ ನಿರ್ದೇಶಕರಾದ ರಘುರಾಮ್ ಪೂಜಾರಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು.


ಈ ಸಂದರ್ಭದಲ್ಲಿ ಮೊಹಮ್ಮದ್ ತಶೀರ್ ನಾಗೂರು, ಸೂರ್ಯಕಾಂತಿ, ಲಕ್ಷ್ಮಣ್ ಕೊರಗ, ಮಂಜುನಾಥ್ ನಾಗೂರು, ಭಾಸ್ಕರ್ ಕೆರ್ಗಾಲು, ಸುರೇಶ್ ಬಾರ್ಕೂರು, ಶಿವರಾಜ್ ಬೈಂದೂರು, ವಿನಯ, ಗೀತಾ ಸುರೇಶ್, ಇಂದಿರಾ ಉಪಸ್ಥಿತರಿದ್ದರು.
ಶಾಲೆಯಲ್ಲಿ ಮತ್ತು ಹಾಸ್ಟೆಲಿರುವ 300 ವಿದ್ಯಾರ್ಥಿಗಳಿಗೆ ಹಣ್ಣು- ಹಂಪಲನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ರಾಜೇಶ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ರೇಣುಕ ಕಾರ್ಯಕ್ರಮ ನಿರ್ವಹಿಸಿದರು. ಶಕೀಲಾ ವಂದಿಸಿದರು .










