ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಇಲ್ಲಿನ ಉಪ್ಪುಂದದಲ್ಲಿ ನಡೆದಿದೆ.
ರಾತ್ರಿ 10.15ರ ಸುಮಾರಿಗೆ ಉಪ್ಪುಂದಲ್ಲಿನ ಖಂಬದಕೋಣೆ ರೈತರ ಸಂಘದ ಎದುರು ಕುಂದಾಪುರದಿಂದ ಬೈಂದೂರಿನ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸವಾರ ನಾಗರಾಜ ಖಾರ್ವಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಯ ಬಗ್ಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










