ಕುಂದಾಪ್ರ ಡಾಆಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್‌ಗಂಗೊಳ್ಳಿ ಇವರ ಆಶ್ರಯದಲ್ಲಿ ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ಸಹಕಾರದೊಂದಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಯುವಕ ಮಂಡಲದ ಅಧ್ಯಕ್ಷ ನಾಗೇಶ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಮನಿಷಾ ಸಂವಿಧಾನ ವಿಧಿಯನ್ನು ಬೋಧಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಗುರುರಾಜ್ ಆಚಾರ್ಯ ಅವರು ಡಾ. ಅಂಬೇಡ್ಕರ್ ವಿಚಾರಧಾರೆಗಳ ಬಗ್ಗೆ ಮಾತನಾಡಿದರು. ಯುವಕ ಮಂಡಲದ ಸದಸ್ಯರು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ ವಂದಿಸಿದರು.










