ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಯಾದ ಸಾಂಪ್ರದಾಯಿಕ ಮೀನುಗಾರರಿಗೆ ಆಳ ಸಮುದ್ರ ಮೀನುಗಾರಿಕಾ ಯಾಂತ್ರೀಕೃತ ದೋಣಿ ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಛೇರಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.










