ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವವು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ., ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.
ಮುಖ್ಯ ಅತಿಥಿ ಡಾ. ಪಾರ್ವತಿ ಜಿ. ಐತಾಳ್ ಇಂಗ್ಲೀಷ್ ಪ್ರಾಧ್ಯಾಪಕರು ಹಾಗೂ ಬರಹಗಾರರು ಕುಂದಾಪುರ ಅವರು ಹೆತ್ತವರು ತಮ್ಮ ಮಗುವಿಗೆ ಸ್ವಲ್ಪ ಸಮಯವನ್ನು ಮೀಸಲಿಟ್ಟು ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ – ಪ್ರಾಥಮಿಕ, ಮುಖ್ಯೋಪಾಧ್ಯಾಯಿನಿ ರೇಶ್ಮಾ ಡಿಸೋಜ ಉಪಸ್ಥಿತರಿದ್ದರು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ. ಸೋಜಾ ಅವರು ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಅಮೂಲ್ಯ ನಾಯಕ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಯುವಿಕಾ ಬಂಗರ ಸಂಬಂಗರ ಸರ್ವರನ್ನು ಸರ್ವರನ್ನು ಸ್ವಾಗತಿಸಿದರು. ಆಕ್ಷರಾ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಅಥನಾ ಜೆ. ಆರಾಧ್ಯ ನಾರಾಯಣ ವಂದನಾರ್ಪಣೆ ಗೈದರು.










