ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕನ್ನಡ ವಿಭಾಗ ಆಶ್ರಯದಲ್ಲಿ ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗ ಕುರಿತು ಕಗ್ಗೋತ್ಸವ ಕಾರ್ಯಕ್ರಮ ಕಾಲೇಜಿನ ಬಿ. ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ ಮತ್ತು ನಿವೃತ್ತ ಎಲ್.ಐ.ಸಿ. ಅಧಿಕಾರಿಗಳಾದ ಡಾ.ಎನ್. ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ, ಮಂಕುತಿಮ್ಮನ ಕಗ್ಗ ನಮ್ಮ ಸಂಸ್ಕೃತಿ ಮೌಲ್ಯ, ಆಧ್ಯಾತ್ಮ, ತಾತ್ವಿಕ ಚಿಂತನೆ ಮತ್ತು ಜೀವನದ ಆದರ್ಶಗಳನ್ನು ಪ್ರತಿಬಿಂಬಿಸುತ್ತದೆ. ಮಾನವನ ಹೊಣೆಗಾರಿಕೆ, ಶ್ರದ್ಧೆ, ತಾಳ್ಮೆ ಮತ್ತು ನೈತಿಕತೆ ತಿಳಿಸುವುದಲ್ಲದೆ ನಿಜವಾದ ಜೀವನದ ಮೌಲ್ಯಗಳು ತಿಳಿಸಲು ಸಂದೇಶಗಳನ್ನು ಒಳಗೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟ್‌ನ ಸದಸ್ಯರುಗಳಾದ ಸುಭಾಶ್ಚಂದ್ರ ಶೆಟ್ಟಿ, ಅನುಪಮ ಎಸ್. ಶೆಟ್ಟಿ, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕುಮಾರ ಪಿ. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಮಮತಾ ವಂದಿಸಿದರು.










