ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಸೇವಾ ಮನೋಭಾವವುಳ್ಳ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಜಿಲ್ಲಾ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ದೂ.ಸಂಖ್ಯೆ: 0820-2533650 ಹಾಗೂ ತಾಲೂಕು ಘಟಕಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.










