ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ದೊಂಬೆ ಕೂಲಿಮನೆ ನಿವಾಸಿ ನರಸಿಂಹ ಪೂಜಾರಿ (62) ಅವರು ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಿ.7ರಂದು ಶಿರಸಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ ಬಂದಿರಲಿಲ್ಲ. ಹುಡುಕಾಡುವಾಗ ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಮೃತರ ಪುತ್ರ ಹರೀಶ್ ಪೂಜಾರಿ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










