ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ನಲ್ಲಿ ಉಡುಪಿ ಜಿಲ್ಲಾ ಮಟ್ಟದ ಶಿಶಿಕ್ಷ ಮೇಳವನ್ನು ಡಿಸೆಂಬರ್ 15 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.
ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ವೆಬ್‌ಸೈಟ್ https://www.apprenticeshipindia.gov.in/candidate-login ಲಿಂಕ್ ಮೂಲಕ ಹಾಗೂ ಅಭ್ಯರ್ಥಿಗಳಿಗೆ ಶಿಶಿಕ್ಷ ತರಬೇತಿ ನೀಡಲು ಇಚ್ಛಿಸುವ ಕಂಪನಿಗಳು ಹಾಗೂ ಕೈಗಾರಿಕೆಗಳು ಮೇಳದಲ್ಲಿ ಭಾಗವಹಿಸಲು https://www.apprenticeshipindia.gov.in/establishment-registration ಲಿಂಕ್ ಮೂಲಕ ಅಥವಾ ಶಿಶಿಕ್ಷ ಮೇಳ ನಡೆಯುವ ದಿನದಂದು ಸಂಸ್ಥೆಯಲ್ಲಿಯೇ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 9980305173 ಮತ್ತು 9900329668 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ










