ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಗುರುವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ಕಾರ್ಯವೈಕರಿಯ ಬಗ್ಗೆ ಶ್ಲಾಘಿಸಿದ ಅವರು ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಅವರೊಂದಿಗೆ ಚರ್ಚಿಸಿದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಜಿಲ್ಲಾಧಿಕಾರಿ ಅವರನ್ನು ಶಾಲು ಹೋದಿಸಿ ಫಲಪುಷ್ಭ ನೀಡಿ ಗೌರವಿಸಿದರು. ಈ ವೇಳೆ ರಾಜಗೋಪಾಲ ಆಚಾರ್ಯ ಪುತ್ರಿ ಹಾಗೂ ಸಹೋದರ ಉಪಸ್ಥಿತರಿದ್ದರು.










