Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಜಾನಪದ ನೃತ್ಯ ವೈಭವʼ ಸ್ಪರ್ಧೆ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಜಾನಪದ ನೃತ್ಯ ವೈಭವʼ ಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಆತ್ಮವಿಶ್ವಾಸ ಮತ್ತು ಧೈರ್ಯ ಇವೆರಡೂ ಅಗತ್ಯವಾಗಿರುತ್ತದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ಸದಾನಂದ ನಾವಡ ಹೇಳಿದರು.

    Click Here

    Call us

    Click Here

    ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಟಿಸಿಹೆಚ್ಆರ್ ಆಪ್ ಬೆಂಗಳೂರು ಇವರು ಸಹಯೋಗದಲ್ಲಿ ನಡೆದ ಕುಂದಾಪುರ ಮತ್ತು ಬೈಂದೂರು ವಲಯ ಮಟ್ಟದ ಅಂತರ್ ಪ್ರೌಢಶಾಲೆಗಳ ಮಟ್ಟದ “ಜಾನಪದ ನೃತ್ಯ ವೈಭವ” ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

    ಬದುಕಿನಲ್ಲಿ ಸವಾಲುಗಳನ್ನು ಸ್ವೀಕರಿಸಲು ಕೇವಲ ಪುಸ್ತಕದ ಓದು ಸಾಲದು. ನಿಮ್ಮ ವಿದ್ಯಾರ್ಥಿ ಜೀವನದ ಪಾಠೇತರ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಅದು ನಿಮ್ಮ ಬದುಕಿನಲ್ಲಿ ಸುಗಮ ರೀತಿಯಲ್ಲಿ ನಡೆಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

    ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಸಹನಾ ಅವರು ಮಾತನಾಡಿ, ಜೀವನದಲ್ಲಿ ಬರುವ ಸವಾಲುಗಳು ದೊಡ್ಡದಿರುತ್ತದೆ. ಈ ವಿದ್ಯಾರ್ಥಿ ಜೀವನ ಎನ್ನುವುದು ಬದುಕಿನ ಅತ್ಯಂತ ಸುಂದರ ಸಮಯವಾಗಿದೆ. ಇದನ್ನು ಪ್ರೀತಿಸಿ, ಆಸ್ವಾದಿಸಿ ಮತ್ತು ಅನುಭವಿಸಿ. ನಿಮ್ಮ ಏಳಿಗೆಗೆ ನೀವೆ ಶಿಲ್ಪಿಗಳು. ಮಹತ್ವಾಕಾಂಕ್ಷಿಯಾಗಿರಿ. ಅದಕ್ಕೆ ತಕ್ಕ ತಯಾರಿ ಮಾಡಿಕೊಳ್ಳಿ, ಅಲ್ಲದೆ ಪಾಠೇತರ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವುದರಿಂದ ಉತ್ತಮ ಸಂಬಂಧ ಮತ್ತು ಸಂವಹನ ಕಲೆ ಕರಗತವಾಗುತ್ತದೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ ಶಾಂತಾರಾಮ್ ಪ್ರಭು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ,  ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸರೋಜ.ಎಮ್ ಉಪಸ್ಥಿತರಿದ್ದರು.

    ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಮ್.ಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಉಪನ್ಯಾಸಕ ವಿದ್ಯಾಧರ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    fifteen + fourteen =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.