ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮಾವಿನಕಟ್ಟೆ ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಅಂಪಾರು ಸಂಜಯ್ ಗಾಂಧಿ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಅಂಪಾರು ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯೋಪಾಧ್ಯಾಯನಿ ಬೇಬಿ ಶೆಟ್ಟಿ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಕುಶಲ ಶೆಟ್ಟಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಉದ್ಯಮಿಗಳಾದ ಹಾಜಿ ಜಿ.ಎಂ. ಚೆರಿಯಬ್ಬ ಸಾಹೇಬ್ ಕ್ರೀಡಾ ಧ್ವಜಾರೋಹಣ ನೆರವೇರಿಸದರು. ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ ಗುಲ್ವಾಡಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ ಪೂಜಾರಿ, ಕ್ರೀಡಾ ಜ್ಯೋತಿ ಬೆಳಗಿಸಿದರು.

ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಕಾಲೇಜು ಕ್ರೀಡಾ ಸಂಚಾಲಕ ಸುಕೇಶೆಟ್ಟಿ, ಸಿ.ಆರ್.ಪಿ ರವಿಚಂದ್ರ, ನೆರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ನಾರಾಯಣ ಕೊಠಾರಿ, ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುರೇಂದ್ರ ಶೆಟ್ಟಿ, ಬೀಸಿನಪಾರೆ ಪ್ರೌಢ ಮುಖ್ಯೋಪಾಧ್ಯಾಯ ಬಡಿಯ, ವೇದಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ರವಿಶಂಕರ್ ಹೆಗ್ಡೆ ಸ್ವಾಗತಿಸಿದರು, ಸಹ ಶಿಕ್ಷಕಿ ಅನಿತಾ ಧನ್ಯವಾದ ಸಲ್ಲಿಸಿದರು. ವಿಜ್ಞಾನ ಶಿಕ್ಷಕ ಭಾಸ್ಕರ ಭಟ್ ಕಾರ್ಯ ಕ್ರಮ ನಿರೂಪಿಸಿದರು.










