Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮುದ್ಯತಾ ಸಂಸ್ಥೆ ಉದ್ಯಮ ಕ್ಷೇತ್ರವಲ್ಲದೆ ಸಾಂಸ್ಕೃತಿಕ ರಂಗದಲ್ಲಿಯೂ ಮುನ್ನುಡಿ ಬರೆಯುತ್ತಿದೆ: ಆನಂದ್ ಸಿ. ಕುಂದರ್
    ಊರ್ಮನೆ ಸಮಾಚಾರ

    ಸಮುದ್ಯತಾ ಸಂಸ್ಥೆ ಉದ್ಯಮ ಕ್ಷೇತ್ರವಲ್ಲದೆ ಸಾಂಸ್ಕೃತಿಕ ರಂಗದಲ್ಲಿಯೂ ಮುನ್ನುಡಿ ಬರೆಯುತ್ತಿದೆ: ಆನಂದ್ ಸಿ. ಕುಂದರ್

    Updated:15/12/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಮುದ್ಯತಾ ಪ್ರಸ್ತುತಿಯಲ್ಲಿ ಡಿಸೆಂಬರ್ 20ರಂದು ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಡಾ.ಸಿ. ಅಶ್ವಥ್ ಸ್ವರ ಸಂಯೋಜನೆಯ ಗೀತೆಗಳ ಪ್ರಸ್ತುತಿ ‘ಕುಂದಾಪುರದಲ್ಲಿ ಸತ್ಯಾವತಾರ’ಕಾರ್ಯಕ್ರಮದ ಪೋಸ್ಟರ್ ಅನಾವರಣ ಕಾರ್ಯಕ್ರಮ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವನ್ಷನ್ ಸೆಂಟರ್‌ನಲ್ಲಿ ನಡೆಯಿತು.

    Click Here

    Call us

    Click Here

    ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್, ಉದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಮುದ್ಯತಾ ಸಂಸ್ಥೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುನ್ನುಡಿ ಬರೆಯುವ ಜೊತೆಗೆ ಜನರಿಗೆ ಹೊಸತನ್ನು ಪರಿಚಯಿಸುವಲ್ಲಿಯೂ ಆಸಕ್ತಿ ವಹಿಸುತ್ತಿದೆ. ಈ ಭಾಗದ ಜನರಿಗೆ ರಾಜ್ಯಮಟ್ಟದಲ್ಲಿ ನಡೆಯುವ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯವಾದುದು. ಈ ಮೂಲಕ ಸಮುದ್ಯತಾ ಸಂಸ್ಥೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು ಹೇಳಿದರು.

    ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಸಿ.ಅಶ್ವಥ್ ಅವರು ಭಾವಗೀತೆಗಳನ್ನು ಹಾಡಲು ಆರಂಭಿಸಿದ ಬಳಿಕ ಭಾವಗೀತೆಗಳ ಬಗ್ಗೆ ಜನರ ಆಕರ್ಷಣೆ ಜಾಸ್ತಿಯಾಗತೊಡಗಿತು. ಅಶ್ವಥ್ ಅವರ ಸ್ವರದಲ್ಲಿ ಕ್ಲಿಷ್ಟವೆನಿಸುವ ಭಾವಗೀತೆಗಳು ಸುಲಲಿತವಾಗಿ, ಜೀವ ಪಡೆದುಕೊಂಡು ಜನಮನದಲ್ಲಿ ಹಾಸುಹೊಕ್ಕಾಯಿತು. ಅಂಥಹ ಅಪರೂಪದ ಕಾರ್ಯಕ್ರಮ ಈ ಭಾಗದಲ್ಲೂ ಆಯೋಜನೆ ಆಗುತ್ತಿರುವುದು ಶ್ಲಾಘನಾರ್ಹ ಎಂದರು.

    ಜನಸೇವಾ ಟ್ರಸ್ಟ್ ಗಿಳಿಯಾರು ಇದರ ಅಧ್ಯಕ್ಷರಾದ ವಸಂತ ಗಿಳಿಯಾರು,ತೆಕ್ಕಟ್ಟೆ ಯಶಸ್ವಿ ಕಲಾವೃಂದದ ವೆಂಕಟೇಶ ವೈದ್ಯ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ  ಮನೋಹರ ಪೂಜಾರಿ, ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಕುಂದರ್, ಸಮುದ್ಯತಾ ಸಂಸ್ಥೆಯ  ಯೋಗೇಂದ್ರ ತಿಂಗಳಾಯ,ಯಶಸ್ವಿ ಕಲಾವೃಂದ ಸಂಯೋಜಕ ವೆಂಕಟೇಶ್ ವೈದ್ಯ,ಸಾಂಸ್ಕೃತಿಕ ಚಿಂತಕ ಉದಯ್ ಶೆಟ್ಟಿ,ಸಮುದ್ಯತಾ ಪಾಲುದಾರ ಹರೀಷ್ ಪೂಜಾರಿ ಉಪಸ್ಥಿತರಿದ್ದರು. ಸಂದೀಪ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

    Click here

    Click here

    Click here

    Call us

    Call us

    ಡಿ.20ರ ಸಂಜೆ ಸಂಸ್ಥೆಯ ಆಯೋಜನೆಯಲ್ಲಿ ಡಾ. ಸಿ. ಅಶ್ವಥ್ ಸ್ವರ ಸಂಯೋಜನೆಯ ಗೀತೆಗಳ ಪ್ರಸ್ತುತಿ ‘ಸತ್ಯಾವತಾರ’ ಕಾರ್ಯಕ್ರಮ ನಡೆಯಲಿದೆ. ಗಾಯನದಲ್ಲಿ ರಾಮಚಂದ್ರ ಹಡಪದ, ಎಂ.ಡಿ ಪಲ್ಲವಿ ಹಾಗೂ ಮೇಘನಾ ಕುಂದಾಪುರ ಭಾಗವಹಿಸಲಿದ್ದಾರೆ. ಡಾ.ಸಿ ಅಶ್ವಥ್ ಅವರ ಒಡನಾಟದ ಬಗ್ಗೆ ಬಿ.ಆರ್.ಲಕ್ಷ್ಮಣ ರಾವ್, ಟಿ.ಎಸ್.ನಾಗಾಭರಣ, ಜೋಗಿ ಮಾತುಗಳನ್ನಾಡಲಿದ್ದಾರೆ ಎಂದು ಸಂಘಟಕ ರಮೇಶ ಎಚ್. ಕುಂದರ್ ಹೇಳಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿ

    06/10/2026

    ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ

    06/10/2026

    ಉದ್ಯಾವರ ಸರಕಾರಿ ಹೈಸ್ಕೂಲ್ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

    06/10/2026
    Leave A Reply Cancel Reply

    18 − fifteen =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿ
    • ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ
    • ಉದ್ಯಾವರ ಸರಕಾರಿ ಹೈಸ್ಕೂಲ್ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
    • ಅಕ್ರಮ ಸಕ್ರಮ ತಂತ್ರಾಂಶ ಸಮಸ್ಯೆ 10 ದಿವಸದೊಳಗೆ ಸರಿಪಡಿಸಿ, ಇಲ್ಲವೇ ಪ್ರತಿಭಟನೆ ಎದುರಿಸಿ: ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.