Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪಲ್ಸ್ ಪೊಲಿಯೋ ಕಾರ್ಯಕ್ರಮವು ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದಡಿಯಲ್ಲಿ ಡಿಸೆಂಬರ್ 21ರ ಭಾನುವಾರದಂದು 0-5 ವರ್ಷದೊಳಗಿನ ಮಕ್ಕಳಿಗೆ ಜಿಲ್ಲೆಯ ಸುಮಾರು 657 ಲಸಿಕಾ ಕೇಂದ್ರಗಳಲ್ಲಿ ಪೊಲೀಯೋ ಹನಿಗಳನ್ನು ಹಾಕಲಾಗುವುದು ಎಂದ ಅವರು, ಎಲ್ಲ ಮಕ್ಕಳಿಗೂ ಪಲ್ಸ್ ಪೊಲೀಯೋ ಲಸಿಕೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಒಟ್ಟು 75,395 ಐದು ವರ್ಷದೊಳಗಿನ ಮಕ್ಕಳನ್ನು ಈಗಾಗಲೇ ಗುರುತಿಸಲಾಗಿದೆ. ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳ ಜೊತೆಯಲ್ಲಿ ಟ್ರಾನ್ಸಿಟ್ 16 ಬೂತುಗಳು, 5 ಮೊಬೈಲ್ ಟೀಮ್‌ಗಳಿದ್ದು, 2180 ಲಸಿಕೆದಾರರು ಹಾಗೂ 155 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ 272 ಸ್ವಯಂ ಸೇವಕರನ್ನು ನಿಯುಕ್ತಿಗೊಳಿಸಲಾಗಿದ್ದು ಲಸಿಕೆದಾರರಿಗೆ ಲಸಿಕೆ ನೀಡುವ ಬಗ್ಗೆ ತರಬೇತಿ ನೀಡಲಾಗಿದೆ ಎಂದರು.

    ಲಸಿಕಾ ದಿನದಂದು ಲಸಿಕೆ ನೀಡಲು ಗುರುತಿಸಲಾದ ಶಾಲೆಗಳನ್ನು ತೆರೆದು ಲಸಿಕೆ ನೀಡಲು ಸಜ್ಜುಗೊಳಿಸಲು, ಲಸಿಕೆ ಸಾಗಾಣಿಕೆಗೆ ಅಗತ್ಯವಿರುವ ವಾಹನಗಳನ್ನು ನಿಯುಕ್ತಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಲಸಿಕೆಯ ಸುರಕ್ಷಿತ ದಾಸ್ತಾನಿನ ಬಗ್ಗೆ ಗಮನ ಹರಿಸಿ ಲಸಿಕೆ ಹಾಳಾಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಲಸಿಕೆಯ ಸುರಕ್ಷಿತ ವಿತರಣೆಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

    ಲಸಿಕಾ ದಿನದಂದು ಲಸಿಕೆಯಿಂದ ಹೊರಗುಳಿದ ಮಕ್ಕಳಿಗೆ ಗ್ರಾಮೀಣ ಭಾಗದಲ್ಲಿ ಡಿಸೆಂಬರ್ 22 ರಿಂದ 23 ರ ವರೆಗೆ ಹಾಗೂ ನಗರ ಭಾಗಗಳಲ್ಲಿ ಡಿ. 22 ರಿಂದ 24 ರ ವರೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಮನೆ-ಮನೆಗೆ ತೆರಳಿ ಲಸಿಕೆ ಹಾಕಲಿದ್ದು, ಅವರಿಗೆ ಅಗತ್ಯ ಸಹಕಾರ ನೀಡಬೇಕು ಎಂದ ಇದಕ್ಕಾಗಿ ಒಟ್ಟು 1314 ತಂಡಗಳು 2,94,250 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲಿದ್ದಾರೆ ಎಂದರು.

    Click here

    Click here

    Click here

    Call us

    Call us

    ವಲಸೆ, ಕಟ್ಟಡ ಹಾಗೂ ಮತ್ತಿತರ ಕೂಲಿ ಕಾರ್ಮಿಕರ ಮಕ್ಕಳು ಲಸಿಕಾ ಕಾರ್ಯಕ್ರಮದಿಂದ ಹೊರಗೆ ಉಳಿಯದಂತೆ ಹೆಚ್ಚು ಜಾಗೃತಿ ಮೂಡಿಸಬೇಕು. ಲಸಿಕಾ ದಿನದಂದು ಮಕ್ಕಳಿಗೆ ಲಸಿಕೆ ತಪ್ಪಿದಲ್ಲಿ ಮರು ದಿನ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮಾಹಿತಿ ನೀಡಬೇಕು ಎಂದ ಅವರು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪ್ರಚಾರ ನೀಡಬೇಕು. ಪಲ್ಸ್ ಪೊಲೀಯೋ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದರು.

    ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

    ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    18 + 6 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.