ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ-2025, ಅವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ 8ನೇ ತರಗತಿಯ ವಿದ್ಯಾರ್ಥಿನಿಯಾದ ನೇಹ ಸತ್ಯನಾರಾಯಣ ಅವರು ರಾಜ್ಯ ಮಟ್ಟದಲ್ಲಿ ಐದನೇ ರ‍್ಯಾಂಕ್ ಪಡೆದಿರುತ್ತಾರೆ.
ಅವರ ರಾಜ್ಯಮಟ್ಟದ ಸಾಧನೆಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ತಿಳಿಸಿರುತ್ತಾರೆ.










