ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆಯಿತು.
ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಮಾಹಿತಿ ನೀಡಿದರು.

ಆಸ್ಪತ್ರೆಯ ಶುಶ್ರೂಶಾಧಿಕಾರಿ ಶೋಭಾ, ರೋಟರಿ ಸದಸ್ಯರಾದ ಉದಯಶಂಕರ ರಾವ್, ವಾಸುದೇವ ಶೇರುಗಾರ್, ಗೋಪಾಲ ಬಿಲ್ಲವ, ಜಗದೀಶ ಪೂಜಾರಿ, ಜನಾರ್ದನ ಪೂಜಾರಿ ಪೆರಾಜೆ, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಚಂದ್ರಕಲಾ ತಾಂಡೇಲ ಕಾರ್ಯಕ್ರಮ ನಿರ್ವಹಿಸಿದರು. ಕೃಷ್ಣ ಪೂಜಾರಿ ಸ್ವಾಗತಿಸಿ, ಶೋಭಾ ವಂದಿಸಿದರು.










