Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    alvas nudisiri

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಮೂಡುಬಿದಿರೆ ಜನಸಾಮಾನ್ಯರ ಆರೋಗ್ಯ ಕಾಳಜಿಯನ್ನು ಮನಗಂಡು ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಆರೋಗ್ಯ ಕೇಂದ್ರವು ಮತ್ತೊಂದು ಮಹತ್ವದ ಹೆಜ್ಜೆಯಾಗಿ ಹೃದಯ ಚಿಕಿತ್ಸಾ ಕೇಂದ್ರ (ಕಾರ್ಡಿಯಾಕ್ ಸೆಂಟರ್) ವನ್ನು ಆರಂಭಿಸಿರುವುದು ಅತ್ಯಂತ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ನುಡಿದರು.

    Click Here

    Call us

    Click Here

    ಅವರು ಬುಧವಾರ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನೂತನವಾಗಿ ಪ್ರಾರಂಭಗೊಂಡ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೂಡುಬಿದಿರೆ, ಮುಲ್ಕಿ, ಕಾರ್ಕಳ ಹಾಗೂ ಬೆಳ್ತಂಗಡಿ ಪ್ರದೇಶಗಳಲ್ಲಿಯೇ ಮೊದಲ ಬಾರಿಗೆ ಸ್ಥಾಪನೆಯಾದ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಈ ಭಾಗದ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದರು.

    ಹೃದಯ ಸಂಬಂಧಿತ ರೋಗಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದ್ದು, ಸಮಯೋಚಿತ ಚಿಕಿತ್ಸೆ ದೊರಕದಿದ್ದರೆ ಅವು ಜೀವಕ್ಕೆ ಅಪಾಯಕಾರಿಯಾಗುತ್ತವೆ. ಇಂತಹ ಸಂದರ್ಭದಲ್ಲಿ ಮೂಡುಬಿದಿರೆಯಲ್ಲೇ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಹೃದಯ ಚಿಕಿತ್ಸಾ ಕೇಂದ್ರ ಸ್ಥಾಪನೆಯಾಗಿರುವುದು ಈ ಪ್ರದೇಶದ ಜನರಿಗೆ ದೊಡ್ಡ ವರದಾನವಾಗಿದೆ. ಇದರಿಂದಾಗಿ ಈಗ ಚಿಕಿತ್ಸೆಗಾಗಿ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದೆ.

    ಶಿಕ್ಷಣವು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಲಿದ್ದು,  ಅದು ವ್ಯಾಪಾರದ ವಸ್ತುವಾಗದೆ ಮಾನವಸೇವೆಯ ಮಹತ್ತರ ಸಾಧನವಾಗಿರಬೇಕು. ವಿಶೇಷವಾಗಿ ವೈದ್ಯಕೀಯ ಶಿಕ್ಷಣದಂತ ಕ್ಷೇತ್ರದಲ್ಲಿ ಲಾಭದ ದೃಷ್ಟಿಕೋನಕ್ಕಿಂತ ಮಾನವೀಯತೆ, ಸೇವಾಭಾವ ಮತ್ತು ಸಾಮಾಜಿಕ ಹೊಣೆಗಾರಿಕೆ ಪ್ರಧಾನವಾಗಬೇಕು. ಇಂದಿನ ದಿನಗಳಲ್ಲಿ ಅನೇಕ ಖಾಸಗಿ ವೈದ್ಯಕೀಯ ಕಾಲೇಜುಗಳು ಶಿಕ್ಷಣ ಸೇವೆಯನ್ನು ನೀಡುತ್ತಿದ್ದರೂ, ಅವುಗಳ ಮೇಲೆ ಸರ್ಕಾರ ವಿಧಿಸಿರುವ ನೀತಿಗಳು ಹಲವು ಸವಾಲುಗಳನ್ನು ಸೃಷ್ಟಿಸುತ್ತಿವೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡಾ 50ರಷ್ಟು ಸೀಟ್‌ಗಳನ್ನು ಸರ್ಕಾರದ ಕೋಟಾದಡಿಯಲ್ಲಿ ನೀಡಲಾಗುತ್ತದೆ. ಈ ಸೀಟ್‌ಗಳಿಗೆ ಸರ್ಕಾರ ನಿಗದಿಪಡಿಸುವ ಶುಲ್ಕವು ಬಹಳ ಕಡಿಮೆ ಇರುತ್ತದೆ. ಆದರೆ ಕಾಲೇಜುಗಳ ನಿರ್ವಹಣಾ ವೆಚ್ಚ, ಅತ್ಯಾಧುನಿಕ ಉಪಕರಣಗಳು, ಪ್ರಯೋಗಾಲಯಗಳು, ಆಸ್ಪತ್ರೆಗಳ ನಿರ್ವಹಣೆ, ತಜ್ಞ ವೈದ್ಯರ ವೇತನ, ಸಂಶೋಧನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇವುಗಳ ವೆಚ್ಚವನ್ನು ಖಾಸಗಿ ಸಂಸ್ಥೆಗಳೇ ಭರಿಸಬೇಕಾಗುತ್ತದೆ. ಸಮಾಜದ ಹಿತವನ್ನು ಗಮನದಲ್ಲಿಟ್ಟುಕೊಂಡಿದ್ದರೂ, ಸರ್ಕಾರದಿಂದ ಸೂಕ್ತ ಬೆಂಬಲ ಇಲ್ಲದಿದ್ದರೆ ಅವುಗಳ ಕಾರ್ಯನಿರ್ವಹಣೆ ಕಷ್ಟಸಾಧ್ಯವಾಗುತ್ತದೆ ಎಂದರು.

    ಎ. ಜೆ ಗ್ರೂಪ್ ಆಫ್ ಇನ್ಸಿಟ್ಯೂಟ್‌ಗಳ ಅಧ್ಯಕ್ಷ ಡಾ. ಎಜೆ ಶೆಟ್ಟಿ ಮಾತನಾಡಿ, ಹೃದಯ ಚಿಕಿತ್ಸಾ ಕೇಂದ್ರವು ಆಳ್ವಾಸ್ ಆರೋಗ್ಯ ಕೇಂದ್ರದ ಸೇವೆಗೆ ಮತ್ತೊಂದು ಮಹತ್ವದ ಆಯಾಮವನ್ನು ನೀಡಿದೆ.  ಹೃದಯ ಸಂಬಂಧಿತ ರೋಗಗಳು ಇಂದಿನ ಜೀವನಶೈಲಿಯಲ್ಲಿ ಅತ್ಯಂತ ಗಂಭೀರ ಹಾಗೂ ತುರ್ತು ಚಿಕಿತ್ಸೆಗೆ ಒಳಪಟ್ಟ ಸಮಸ್ಯೆಗಳಾಗಿವೆ. ಇಂತಹ ಸಂದರ್ಭಗಳಲ್ಲಿ ಸಮಯವೇ ಅತ್ಯಂತ ಮುಖ್ಯವಾಗಿರುವುದರಿಂದ, ಮೂಡುಬಿದಿರೆಯಲ್ಲೇ ಅತ್ಯಾಧುನಿಕ ಹೃದಯ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗಿರುವುದು ಅನೇಕ ಜೀವಗಳನ್ನು ಉಳಿಸುವಲ್ಲಿ ಸಹಕಾರಿಯಾಗಲಿದೆ ಎಂದರು.

    Click here

    Click here

    Click here

    Call us

    Call us

    ಕಣಚೂರು  ಗ್ರೂಪ್ ಆಫ್ ಇನ್ಸಿಟ್ಯೂಟ್‌ಗಳ ಸ್ಥಾಪಕಾಧ್ಯಕ್ಷ ಡಾ ಹಾಜಿ ಯು.ಕೆ ಮೋನು ಮಾತನಾಡಿ, ಸಾಮಾನ್ಯವಾಗಿ ಮಹಾನಗರಗಳಿಗೆ ಮಾತ್ರ ಸೀಮಿತವಾಗಿರುವ ಅತ್ಯಾಧುನಿಕ ಹೃದಯ ಚಿಕಿತ್ಸಾ ಸೌಲಭ್ಯವನ್ನು ಒಂದು ಸಣ್ಣ ಪಟ್ಟಣವಾದ ಮೂಡುಬಿದಿರೆಗೆ ತಂದುಕೊಟ್ಟಿರುವುದು ನಿಜಕ್ಕೂ ಶ್ಲಾಘನೀಯ. ಇದು ಕೇವಲ ಆರೋಗ್ಯ ಸೇವೆಯಲ್ಲ, ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಉನ್ನತ ಹಂತಕ್ಕೆ ಕೊಂಡೊಯ್ಯುವ ಮಹತ್ವದ ಹೆಜ್ಜೆಯಾಗಿದೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾನು ಎಂದಿಗೂ ನನ್ನ ಊರನ್ನು ಬಿಟ್ಟು ಹೋಗಬೇಕೆಂದು ಭಾವಿಸಿಲ್ಲ. ನನ್ನಿಂದ ಸಾಧ್ಯವಾದ ಎಲ್ಲಾ ಕಾರ್ಯಗಳನ್ನು ನನ್ನದೇ ನೆಲದಲ್ಲಿ, ನನ್ನ ಜನರಿಗಾಗಿ ಮಾಡುವುದೇ ನನ್ನ ಗುರಿಯಾಗಿದೆ. ಇಂದು ನನಗೆ ಅತ್ಯಂತ ಭಾಗ್ಯಶಾಲಿ ದಿನ ಎಂದರು.  ಜೀವನದಲ್ಲಿ ಎದುರಾದ ಅನೇಕ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಈ ಹಂತದ ಯಶಸ್ಸನ್ನು ಸಾಧಿಸಿದ್ದೇನೆ.  ಸಂಕಷ್ಟಗಳು ತಮ್ಮನ್ನು ಕುಗ್ಗಿಸದೇ ಇನ್ನಷ್ಟು ದೃಢ ಸಂಕಲ್ಪದೊಂದಿಗೆ ಮುನ್ನಡೆಯಲು ಸಹಾಯ ಮಾಡಿವೆ ಎಂದರು.

    1980ರ ದಶಕದಲ್ಲೆ ಆಳ್ವಾಸ್ ಆರೋಗ್ಯ ಕೇಂದ್ರವನ್ನು ಆರಂಭಿಸಿ,  ಎಲ್ಲಾ ವಿಶೇಷ ತಜ್ಞ ವೈದ್ಯರ ಸೇವೆಯನ್ನು ಜನಸಾಮಾನ್ಯರಿಗೆ ಕನಿಷ್ಠ ಶುಲ್ಕದಲ್ಲಿ  ನೀಡಿದ ನೆಮ್ಮದಿ ನನಗಿದೆ. ವೈದ್ಯಕೀಯ ಕ್ಷೇತ್ರ ಇಂದಿನ ಮಟ್ಟಕ್ಕೆ ಬೆಳೆಯಲು ಖಾಸಗಿ ಕ್ಷೇತ್ರದ ಭಾಗವಹಿಸುವಿಕೆ ಮಹತ್ವದ ಪಾತ್ರ ವಹಿಸಿದೆ. ಈ ಕ್ಷೇತ್ರದಲ್ಲಿ ಲಾಭಕ್ಕಿಂತ ಮೌಲ್ಯಗಳು ಮುಖ್ಯವಾಗಬೇಕು. ತಮ್ಮ ಜೀವನ ಮತ್ತು ಕಾರ್ಯಕ್ಷೇತ್ರದಲ್ಲಿ ಯಾವತ್ತೂ ಮೌಲ್ಯಗಳು, ನೈತಿಕತೆ, ಕರುಣೆ, ಪ್ರೀತಿ ಹಾಗೂ ಮಾನವೀಯತೆಯನ್ನು ಬಿಟ್ಟು ವ್ಯವಹರಿಸಿಲ್ಲ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ ಆಳ್ವ ಪ್ರಸ್ತಾವಿಕ ಮಾತಗಳನ್ನಾಡಿ, ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಮೆಡಿಕಲ್ ಕಾಲೇಜಿನ ಡೀನ್ ಡಾ ಮಹಾಬಲ ಶೆಟ್ಟಿ, ತಜ್ಞ ವೈದ್ಯ ಡಾ ಹರೀಶ್ ನಾಯಕ, ಸ್ತ್ರಿ ತಜ್ಞೆ ಡಾ. ಹನ ಶೆಟ್ಟಿ ಇದ್ದರು.

    ಆಳ್ವಾಸ್ ಕಾರ್ಡಿಯಾಕ್ ಸೆಂಟರ್‌ನ ಮುಖ್ಯಸ್ಥ ಡಾ. ದಿತೇಶ್ ವಂದಿಸಿದರು. ವೇಣುಗೋಪಾಲ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    17 + 10 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.