ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೇವಾ ಮನೋಭಾವದಿಂದ ಮಾಡುವ ಯಾವುದೇ ಕೆಲಸ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ಆದ್ದರಿಂದ ರಾಷ್ಟ್ರೀಯ ಸೇವಾ ಯೋಜನೆ ಇಂತಹ ಸೇವೆಯನ್ನು ಸಮುದಾಯಕ್ಕೆ ನೀಡಲು ಒಳ್ಳೆಯ ವೇದಿಕೆಯನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತದೆ. ವಿದ್ಯಾರ್ಥಿಗಳು ಒಂದು ದಿನದ ವಿಶೇಷ ಶಿಬಿರದಲ್ಲಿ ಪಡೆದ ಅನುಭವವನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಹೇಳಿದರು.
ಅವರು ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ, ಬಾಂಡ್ಯದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
,

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ ಬಾಂಡ್ಯ ಇಲ್ಲಿನ ಮುಖ್ಯೋಪಾಧ್ಯಾಯರಾದ ಸಂತೋಷ ಕುಮಾರ್ ಶೆಟ್ಟಿ ಚೋನಾಳಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವೆಯ ಮನೋಭಾವನೆ ರೂಪುಗೊಳ್ಳಬೇಕಾದರೆ ಎನ್.ಎಸ್.ಎಸ್. ಶಿಬಿರದಲ್ಲಿ ಪಾಲ್ಗೊಂಡಾಗ ಸ್ವಾವಲಂಬನೆ ಬದುಕು ಸಾಧಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರತ್ನಾಕರ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೃಷ್ಣ ಮಡಿವಾಳ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ ಡಾ. ರವಿಚಂದ್ರ ಸ್ವಾಗತಿಸಿ, ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಮನವಿ ಕೆ.ಕೆ ವಂದಿಸಿದರು.















