ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದಲ್ಲಿ ಸಂಭವಿಸಿದೆ.
ಉಪ್ಪುಂದ ಜನತಾ ಕಾಲನಿ ಹರಿಶ್ಚಂದ್ರ ಖಾರ್ವಿ(48) ಮೃತಪಟ್ಟ ವ್ಯಕ್ತಿ.
ಉಪ್ಪುಂದ ಗ್ರಾಮದ ಮಡಿಕಲ್ ಬಳಿ ಅರಬಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದಾಗ ಹರಿಶ್ಚಂದ್ರ ಖಾರ್ವಿ ದೋಣಿಯಿಂದ ಆಯತಪ್ಪಿ ಸಮುದ್ರಕ್ಕೆ ನೀರಿಗೆ ಬಿದ್ದಿದ್ದು ಕೂಡಲೇ ಅವರನ್ನು ನೀರಿನಿಂದ ಮೇಲೆ ಎತ್ತಿ ಉಪಚರಿಸಲಾಗಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನುಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















