Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಳ ಕ್ರಿಯೇಟಿವ್ ಕಾಲೇಜು: ʼಭೂತಾರಾಧನೆ – ಮಾಯದ ನಡೆ ಜೋಗದ ನುಡಿʼ ಕೃತಿ ಬಿಡುಗಡೆ
    ಊರ್ಮನೆ ಸಮಾಚಾರ

    ಕಾರ್ಕಳ ಕ್ರಿಯೇಟಿವ್ ಕಾಲೇಜು: ʼಭೂತಾರಾಧನೆ – ಮಾಯದ ನಡೆ ಜೋಗದ ನುಡಿʼ ಕೃತಿ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ – ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕೃತಿಯನ್ನು ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರು ಅನಾವರಣಗೊಳಿಸಿ ಮಾತನಾಡಿ, ಭೂತಾರಾಧನೆ ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನ ಎಂದು ಅಭಿಪ್ರಾಯಪಟ್ಟರು. ಡಾ. ಕೆ. ಚಿನ್ನಪ್ಪ ಗೌಡರ ಈ ಕೃತಿ ಜಾನಪದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದರು.

    ಕೃತಿ ಅವಲೋಕನವನ್ನು ಡಾ. ರಾಜಶೇಖರ್ ಹಳೆಮನೆ ಅವರು ನಡೆಸಿ, ಭೂತಾರಾಧನೆಯ ಆಚರಣೆ, ನುಡಿ, ನಡೆ ಮತ್ತು ಸಮಾಜದ ಒಳಹೊಮ್ಮುಗಳನ್ನು ವೈಜ್ಞಾನಿಕ ದೃಷ್ಟಿಯಿಂದ ದಾಖಲಿಸುವ ಗಂಭೀರ ಸಂಶೋಧನಾ ಕೃತಿಯಿದು ಎಂದು ಪ್ರಶಂಸಿಸಿದರು.

    ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯಅಧ್ಯಕ್ಷ ಡಾ. ನಾಗಪ್ಪ ಗೌಡ ಆರ್. ಮಾತನಾಡಿ, ಭೂತಾರಾಧನೆ ಕುರಿತ ಸಂಶೋಧನೆಗಳು ಕನ್ನಡ ಸಂಸ್ಕೃತಿಯ ಬೇರುಗಳನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ ಎಂದರು.

    ಲೇಖಕರಾದ ಡಾ. ಕೆ. ಚಿನ್ನಪ್ಪ ಗೌಡ ಅವರು ಮಾತನಾಡಿ, ಈ ಕೃತಿ ಕ್ಷೇತ್ರ ಅಧ್ಯಯನ, ಅನುಭವ ಮತ್ತು ಸಂಶೋಧನೆಯ ಫಲವಾಗಿದ್ದು, ಭೂತಾರಾಧನೆಯ ಒಳಾರ್ಥವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶ ಹೊಂದಿದೆ ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಕಳ  ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ಜಾನಪದ ಸಂಸ್ಕೃತಿ ಕೇವಲ ಆಚರಣೆಯಲ್ಲ, ಅದು ಸಮುದಾಯದ ಬದುಕಿನ ಜ್ಞಾನಭಂಡಾರ. ಇಂತಹ ಸಂಶೋಧನಾ ಕೃತಿಗಳು ಆ ಜ್ಞಾನವನ್ನು ಸಮಾಜದ ಮುಂದೆ ತರುವ ಮಹತ್ವದ ಕೆಲಸ ಮಾಡುತ್ತವೆ. ಕ್ರಿಯೇಟಿವ್ ಪುಸ್ತಕ ಮನೆ ಇಂತಹ ಮೌಲ್ಯಯುತ ಕೃತಿಗಳನ್ನು ಪ್ರಕಟಿಸುವ ಮೂಲಕ ಕನ್ನಡ ಸಂಸ್ಕೃತಿಗೆ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಖ್ಯಾತ ದೈವ ನರ್ತಕರಾದ ಶೇಖರ ಪರವ, ಕಾಪುಮಜಲು ಅವರಿಗೆ ಗೌರವ ಸನ್ಮಾನ ಮಾಡಲಾಯಿತು. ಜಾನಪದ ವಿದ್ವಾಂಸ ಡಾ. ಅಶೋಕ ಆಳ್ವ ರವರು ಸನ್ಮಾನಪತ್ರ ವಾಚಿಸಿದರು. ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ ಅತಿಥಿ ಅಭ್ಯಾಗತರನ್ನು ಸನ್ಮಾನಿಸಿ, ಗೌರವಿಸಲಾಯಿತು.

    ಕರಾವಳಿ ಲೇಖಕಿಯರ – ವಾಚಕಿಯರ ಸಂಘ, ಗಿಳಿವಿಂಡು (ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳಗಂಗೋತ್ರಿ) ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಮಂಗಳೂರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಆಸಕ್ತರಿಂದ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

    ಉಪನ್ಯಾಸಕರಾದ ಡಾ. ದಿನೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಪ್ರಿಯಾಂಕ ಸ್ವಾಗತಿಸಿ, ಡಾ. ಮಹಾಲಿಂಗ ಭಟ್ ಕೆ. ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    11 + 10 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.