ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ಪೂರ್ವ ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ ಚಿಕ್ಕಮಂಗಳೂರಿನಲ್ಲಿ ಆಯೋಜಿಸಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ 2025 – 26ನೇ ಸಾಲಿನ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ – 85 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅನುಪಮ ಸಾಧನೆ ಮೆರೆದಿದ್ದಾನೆ.
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.










