ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ಭಾರತ ವಲಯ–15ರ 2026ನೇ ಸಾಲಿನ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆಯಾಗಿದ್ದಾರೆ.
ಅವರು 2025ನೇ ಸಾಲಿನಲ್ಲಿ ಉಪ್ಪುಂದ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ‘ಜೇಸಿ ಉತ್ಸವʼ ಎಂಬ ಅಭೂತಪೂರ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ಭರತ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಸಂಘ–ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ, ಸಂಘಟನಾ ಹಾಗೂ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ.










