ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.
ರಾಜಸ್ಥಾನದ ಕರೋಲಿ ಮೂಲದ ಹೇಮೇಂದರ ಸಿಂಗ್ (40) ಮೃತಪಟ್ಟವರು.
ಬಸ್ರೂರು ಮಾರ್ಗೊಳಿ ಎಂಬಲ್ಲಿ ಟೈಲ್ಸ್ ಫಿಟ್ಟಿಂಗ್ ಕೆಲಸ ಮಾಡುತ್ತಿದ್ದ ಹೇಮೇಂದರ ಸಿಂಗ್ ಮನೆಯ ತಾರಸಿ ಮೇಲೆ ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಣಿಪಾಲದ ಆಸ್ಪತ್ರೆಗೆ ಕಳುಹಿಸಿದರು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















