ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಹಲವು ವರ್ಷಗಳಿಂದ ಈ ಭಾಗದ ಕೃಷಿಕರಿಗೆ ಅನುಕೂಲವಾಗುವಂತೆ ಹಲವು ಮಾದರಿ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ರೂಪಿಸುವ ಕಾರ್ಯ ಈ ಸಹಕಾರಿ ಸಂಘದಿಂದಾಗಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

ಅವರು ಮಂಗಳವಾರ ಉಪ್ಪುಂದ ರೈತ ಸಿರಿ ಸಭಾಭವನದಲ್ಲಿ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಹಾಗೂ ರೈತ ಸಿರಿ, ಸೇವಾ ಒಕ್ಕೂಟ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ರೈತರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪ್ರಗತಿಪರ ಕೃಷಿಕ ದೀಟಿ ಸೀತಾರಾಮ ಮಯ್ಯ ಅವರನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರಾದ ಈಶ್ವರ ಹಕತೋಡ್, ಮೋಹನ ಪೂಜಾರಿ, ಬಿ. ಎಸ್. ಸುರೇಶ ಶೆಟ್ಟಿ ಗುರುರಾಜ ಹೆಬ್ಬಾರ್, ಭರತ್ ದೇವಾಡಿಗ, ಹೂವ ನಾಯ್ಕ, ಪ್ರಕಾಶ ಎನ್. ಪೂಜಾರಿ, ರಾಜೇಶ ದೇವಾಡಿಗ, ಉದಯ ಕುಮಾರ್ ಶೆಟ್ಟಿ, ದಿನೀತಾ ಶೆಟ್ಟಿ, ಲೀಲಾ ಕೆ. ಪೂಜಾರಿ, ರಂಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ವಿಷ್ಣು ಆರ್. ಪೈ. ಸ್ವಾಗತಿಸಿ, ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿ, ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು.














